Friday, November 22, 2024
Homeರಾಜಕೀಯ | Politicsಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಸುದ್ದಿ ಸಂಸ್ಥೆಗಳ ಮೇಲಿನ ದಾಳಿ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ : ಸಚಿವ ಗುಂಡೂರಾವ್

ಬೆಂಗಳೂರು,ಅ.4- ಕೇಂದ್ರ ಸರ್ಕಾರದ ಲೋಪದೋಷಗಳನ್ನು ಬಹಿರಂಗಪಡಿಸಿದ ಸುದ್ದಿ ಸಂಸ್ಥೆಗಳ ವಿರುದ್ಧ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸುವ ಮೂಲಕ ಸತ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‍ಗುಂಡೂರಾವ್ ಆರೋಪಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ದೆಹಲಿಯ ಪೊಲೀಸರ ಮೂಲಕ ಸುದ್ದಿ ಸಂಸ್ಥೆಯ ಮೇಲೆ ದಾಳಿ ನಡೆಸಿರುವುದು ಕೇಂದ್ರದ ಸರ್ವಾಧಿಕಾರಿ ಮನಸ್ಥಿತಿಯ ಪ್ರತೀಕ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಸಾಧಕ-ಬಾಧಕಗಳ ಕುರಿತು ಚರ್ಚೆ : ಪರಮೇಶ್ವರ್

ದಾಳಿಗೊಳಗಾದ ಸುದ್ದಿ ಸಂಸ್ಥೆ ಸಿಎಎ ಮತ್ತು ಕೃಷಿ ಕಾಯ್ದೆ ವಿರೋಸಿ ನಡೆದಿದ್ದ ರೈತರ ಹೋರಾಟದಲ್ಲಿ ಕೇಂದ್ರ ಸರ್ಕಾರದ ಹುಳುಕುಗಳನ್ನು ಎತ್ತಿ ತೋರಿಸಿತ್ತು. ಅದರ ಅಸಹನೆಯ ಫಲವಾಗಿ ಈ ಮಾಧ್ಯಮ ಸಂಸ್ಥೆಯ ಮೇಲೆ ಕೇಂದ್ರ ಸರ್ಕಾರ ದಾಳಿ ನಡೆಸಿದೆ ಎಂದು ದೂರಿದ್ದಾರೆ.

ಇಡಿ, ಸಿಬಿಐ, ಐಟಿಯಂತಹ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಇಲ್ಲಿಯವರೆಗೂ ತನ್ನ ರಾಜಕೀಯ ವಿರೋಧಿಗಳ ವಿರುದ್ಧ ಬಳಸುತಿತ್ತು. ಈಗ ತನ್ನ ಹುಳುಕುಗಳನ್ನು ಎತ್ತಿ ತೋರಿಸುವ ಮಾಧ್ಯಮ ಸಂಸ್ಥೆಗಳ ಮೇಲೂ ಈ ಸಂಸ್ಥೆಗಳನ್ನು ಛೂ ಬಿಡುತ್ತಿದೆ. ತಾನು ಪ್ರಶ್ನಾತೀತ, ತನ್ನನ್ನು ಯಾರೂ ಪ್ರಶ್ನಿಸಬಾರದು ಎಂಬ ಕೇಂದ್ರದ ಧೋರಣೆಯೇ ದಾಳಿಗೆ ಕಾರಣ. ಮಾಧ್ಯಮಗಳನ್ನು ಹೆದರಿಕೆಯಿಂದ ಬಾಯಿ ಮುಚ್ಚಿಸುವ ತಂತ್ರ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಚುನಾವಣಾ ಸಮೀಪದಲ್ಲೇ ಕೇಂದ್ರ ಕೆಲವು ಮಾಧ್ಯಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ತನ್ನ ಹುಳುಕುಗಳು ಬಯಲಾಗುವ ಭಯದಿಂದ ಸತ್ಯ ಹೇಳುವ ಮಾಧ್ಯಮಗಳನ್ನು ಮಟ್ಟ ಹಾಕುವ ಕೆಲಸವನ್ನು ಕೇಂದ್ರ ವ್ಯವಸ್ಥಿತವಾಗಿ ಮಾಡುತ್ತಿದೆ ಎಂದು ದೂರಿದ್ದಾರೆ.

RELATED ARTICLES

Latest News