Thursday, December 7, 2023
Homeರಾಷ್ಟ್ರೀಯಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ

ಡಿಎಂಕೆ ಸಚಿವ ವೇಲು ಮನೆ ಮೇಲೆ ಐಟಿ ದಾಳಿ

ಚೆನ್ನೈ,ನ.3- ಆಡಳಿತಾರೂಢ ಡಿಎಂಕೆಯ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಇ.ವಿ.ವೇಲು ಅವರಿಗೆ ಸೇರಿದ ನಿವಾಸ ಮತ್ತು ಶಿಕ್ಷಣ ಸಂಸ್ಥೆ ಸೇರಿದಂತೆ ರಾಜ್ಯಾದ್ಯಂತ ನಲವತ್ತು ಸ್ಥಳಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಚೆನ್ನೈ, ತಿರುವನ್ನಮಲೈ, ಕೊಯಮತ್ತೂರು ಸೇರಿದಂತೆ ಒಟ್ಟು ರಾಜ್ಯದ 40 ಕಡೆ ವೇಲು ಅವರ ನಿವಾಸ, ಕಚೇರಿ, ಶಿಕ್ಷಣ ಸಂಸ್ಥೆಗಳು, ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆದಿದೆ. ಡಿಎಂಕೆಯಲ್ಲಿ ಅತ್ಯಂತ ಪ್ರಭಾವಿ ನಾಯಕನಾಗಿರುವ ವೇಲು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‍ರವರ ಸಚಿವ ಸಂಪುಟದಲ್ಲಿ ಅತ್ಯಂತ ಪ್ರಭಾವಿ ಎನಿಸಿದ ಲೋಕೋಪಯೋಗಿ ಖಾತೆಯ ಸಚಿವರಾಗಿದ್ದಾರೆ.

ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಚುಂಬಿಸಿ ಪರಾರಿಯಾದ ಕಿಡಿಗೇಡಿಗಳು

ತಿರುವನ್ನಮಲೈಯಲ್ಲಿ ಅವರ ಒಡೆತನಕ್ಕೆ ಸೇರಿದ ಇಂಜಿನಿಯರಿಂಗ್ ಕಾಲೇಜು ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ತೆರಿಗೆ ವಂಚನೆ ಸಂಬಂಧ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೆ ವೈದ್ಯಕೀಯ, ದಂತ ವೈದ್ಯಕೀಯ, ಫಾರ್ಮಸಿ ಕಾಲೇಜುಗಳ ಮೇಲೂ ದಾಳಿ ನಡೆಸಲಾಗಿದೆ. ಇತ್ತೀಚಿನ ದಿನಗಳಲ್ಲೇ ಇದು ಅತಿದೊಡ್ಡ ದಾಳಿ ಎನಿಸಿದೆ.

ಶಿಕ್ಷಣ ಸಂಸ್ಥೆಗಳ ಮಾಲೀಕರಾಗಿರುವ ಇ.ವಿ.ವೇಲು ಅವರು ಹಲವಾರು ವರ್ಷಗಳಿಂದ ಸರ್ಕಾರಕ್ಕೆ ತೆರಿಗೆ ಕಟ್ಟದೆ ವಂಚನೆ ಮಾಡಿದ್ದಾರೆ ಎಂಬ ಆರೋಪವಿದೆ. ಕಳೆದವಾರವಷ್ಟೇ ಐಟಿ ಅಧಿಕಾರಿಗಳು ಡಿಎಂಕೆಯ ಮತ್ತೊಬ್ಬ ನಾಯಕ ಜಗತ್‍ರಕ್ಷನ್ ಎಂಬುವರ ಮನೆ ಮೇಲೂ ದಾಳಿ ನಡೆಸಿತ್ತು.

RELATED ARTICLES

Latest News