ಮಹಾರಾಷ್ಟ್ರಕ್ಕೆ ಒಂದಿಂಚೂ ಜಾಗ ಬಿಡಲ್ಲ : ಕಾರಜೋಳ

Social Share

ಬೆಂಗಳೂರು,ಡಿ.7- ಯಾವುದೇ ಕಾರಣಕ್ಕೂ ಕರ್ನಾಟಕದ ಒಂದಿಂಚೂ ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಗೋವಿಂದ.ಎಂ ಕಾರಜೋಳ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಗಡಿವಿವಾದ ಸಂಬಂಧ ಮಹಾಜನ್ ವರದಿಯೇ ಅಂತಿಮ. ರಾಜ್ಯದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳು ಸೇರಿದಂತೆ ಒಂದಿಂಚು ಜಾಗವನ್ನು ಬಿಟ್ಟು ಕೊಡುವುದಿಲ್ಲ ಎಂದು ಗುಡುಗಿದರು.

ರಾಜಕೀಯಕ್ಕಾಗಿ ಮಹಾರಾಷ್ಟ್ರದವರು ಪದೇ ಪದೇ ಗಡಿ ವಿವಾದವನ್ನು ಕೆಣಕಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಎರಡು ಉಭಯ ರಾಜ್ಯಗಳ ನಡುವೆ ಸಾಕಷ್ಟು ಸಾಮರಸ್ಯವಿದೆ. ಇದನ್ನು ಹಾಳುಗೆಡುವ ಕೆಲಸ ಮಾಡಬೇಡಿ ಎಂದು ಮನವಿ ಮಾಡಿದರು.

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಮಗು ಕೊಂದ ತಾಯಿ

ಈಗಾಗಲೇ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂದಿದ್ದರೂ ಮಹಾರಾಷ್ಟ್ರ ಸರ್ಕಾರ ತನ್ನ ಸ್ವಾರ್ಥಕ್ಕಾಗಿ ಗಡಿ ವಿವಾದವನ್ನು ಕೆದಕುತ್ತಿದೆ. ಅವರು ಕನ್ನಡಿಗರನ್ನು ಭಾಷಾ ವಿವಾದ ಮುಂದಿಟ್ಟುಕೊಂಡು ನಮ್ಮ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾವು ಇದಕ್ಕೆ ಸೊಪ್ಪು ಹಾಕುವುದಿಲ್ಲ ಎಂದು ಎಚ್ಚರಿಸಿದರು.

ಸಾರ್ವಜನಿಕರ ಆಸ್ತಿ, ಬಸ್ಸುಗಳು, ಖಾಸಗಿ ವಾಹನಗಳನ್ನು ಹಾಳುಗೆಡುವ ಕೆಲಸವನ್ನು ಯಾರೂ ಮಾಡಬಾರದು. ನಮ್ಮದು ಭಾಷೆ ಬೇರೆಯಾದರೂ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ವಾಣಿಜ್ಯ ವಹಿವಾಟು ಸೇರಿದಂತೆ ಹಲವು ವಿಷಯಗಳಲ್ಲಿ ಸಾಮ್ಯತೆಯಿದೆ. ಇದನ್ನು ಅರ್ಥ ಮಾಡಿಕೊಂಡು ಮುನ್ನಡೆಯಬೇಕೆಂದು ಕಾರಜೋಳ ಸಲಹೆ ಮಾಡಿದರು.

ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಹಾರಾಷ್ಟ್ರದ ಸಿಎಂ ಏಕನಾಥ್ ಸಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಅಲ್ಲಿನ ಮುಖ್ಯ ಕಾರ್ಯದರ್ಶಿ ಮತ್ತಿತರರ ಜೊತೆ ಮಾತುಕತೆ ನಡೆಸಿದ್ದಾರೆ. ಸಕಾರಾತ್ಮಕವಾದ ಮಾತುಕತೆ ನಡೆದಿದೆ ಎಂದರು.

ಸರ್ವಪಕ್ಷ ಸಭೆ ಅಗತ್ಯವಿಲ್ಲ. ಗಡಿವಿವಾದ ಕುರಿತು ಸರ್ವಪಕ್ಷ ಸಭೆ ಕರೆಯಬೇಕೆಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಕಾರಜೋಳ ಸದ್ಯ ಸರ್ವಪಕ್ಷ ಸಭೆ ಕರೆಯುವ ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಹೇಳಿದರು.

ಆಡಳಿತ ಪಕ್ಷಕ್ಕೆ ಯಾವಾಗ ಸರ್ವಪಕ್ಷ ಸಭೆ ಕರೆಯಬೇಕೆಂಬುದು ಗೊತ್ತಿದೆ. ಸಿದ್ದರಾಮಯ್ಯ ಹೇಳಿದಂತೆ ನಾವು ಆಡಳಿತ ನಡೆಸಲು ಸಾಧ್ಯವಿಲ್ಲ. ರಾಜಕೀಯ ಲಾಭಕ್ಕಾಗಿ ಅಲ್ಲಿನವರು ಗಡಿ ವಿವಾದ ಕೆದಕುತ್ತಾರೆ. ಅದಕ್ಕೆಲ್ಲ ನಾವು ತಲೆಕೆಡಿಸಿಕೊಳ್ಳಬಾರದೆಂದು ತಿರುಗೇಟು ಕೊಟ್ಟರು.

ದೆಹಲಿ ಪಾಲಿಕೆ ಗದ್ದುಗೆಗೆ ಬಿಜೆಪಿ-ಆಪ್ ನಡುವೆ ಪ್ರಬಲ ಪೈಪೋಟಿ

ಉಭಯ ರಾಜ್ಯಗಳ ನಡುವೆ ಶಾಂತಿ ಸೌಹಾರ್ದತೆ ಕಾಪಾಡುವುದು ಮುಖ್ಯ.ಭಾಷಾ ಸಾಮರಸ್ಯವನ್ನು ಹಾಳುಗೆಡುವ ಪ್ರಯತ್ನ ಯಾರು ಮಾಡಬಾರದು. ಮಹಾರಾಷ್ಟ್ರ ಸರ್ಕಾರ ಅಲ್ಲಿನ ಸಂಘಟನೆಗಳ ಪುಂಡಾಟಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಆರ್‍ಟಿನಗರದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿದ ಕಾರಜೋಳ ಅವರು ಬೆಳಗಾವಿ ಪರಿಸ್ಥಿತಿ ಕುರಿತಂತೆ ಮಾಹಿತಿ ನೀಡಿದ್ದಾರೆ.

ಥಳಿಸಿ ತಾಯಿಯನ್ನು ಕೊಂದ ಮಗ

ಸುಮಾರು 10 ನಿಮಿಷಕ್ಕೂ ಹೆಚ್ಚು ಕಾಲ ಸಿಎಂ ಬೊಮ್ಮಾಯಿ ಜೊತೆ ಮಾತುಕತೆ ನಡೆಸಿದ ಕಾರಜೋಳ, ಬೆಳಗಾವಿಯಲ್ಲಿ ಉಂಟಾಗಿರುವ ಪ್ರಕ್ಷುಬ್ದತೆ, ಕಿಡಿಗೇಡಿಗಳಿಂದ ಬಸ್ ತಡೆ, ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳು, ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ಮಾಹಿತಿ ನೀಡಿದ್ದಾರೆ.

Minister, Govind karjol, Maharashtra, border, dispute,

Articles You Might Like

Share This Article