ಬೆಂಗಳೂರು,ಅ.5- ರಾಜ್ಯದಲ್ಲೂ ಕೆಮ್ಮಿನ ಸಿರಪ್‌ಗಳ ಮೇಲೆ ನಿಗಾ ವಹಿಸುವಂತೆ ರಾಜ್ಯದ ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ರಾಜಸ್ಥಾನ, ಮಧ್ಯಪ್ರದೇಶ ಮತ್ತಿತರ ಕಡೆ ಕೆಮ್ಮಿನ ಸಿರಪ್‌ನಿಂದಾಗಿ ಮಕ್ಕಳು ಮೃತಪಟ್ಟ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಮ ರಾಜ್ಯಕ್ಕೆ ಕೋಲ್ಡ್ರೀಫ್ ಕಫ್ ಸಿರಪ್ ಪೂರೈಕೆ ಆಗಿಲ್ಲ. ಖಾಸಗಿಯಾಗಿ ತರಿಸಿಕೊಂಡಿದ್ದಾರಾ ಎಂಬ ಬಗ್ಗೆ ಪರೀಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಬೇರೆ ಬ್ರಾಂಡ್‌ಗಳ ಕೆಮಿನ ಸಿರಪ್‌ಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದರು.
ತಮಿಳುನಾಡಿನ ಕೆಲ ಜಿಲ್ಲೆಗಳಿಗೆ ಮಾತ್ರ ಈ ಸಿರಪ್ ಸರಬರಾಜಾಗಿದ್ದು, ಲ್ಯಾಬ್ ವರದಿಗಳಲ್ಲಿ ಔಷಧಿಯಿಂದ ತೊಂದರೆಯಾಗಿರುವುದು ದೃಢಪಟ್ಟಿದೆ. ಇದರ ಪರಿಣಾಮವಾಗಿ ಔಷಧಿ ತಯಾರಿಕೆ ನಿಲ್ಲಿಸಲಾಗಿದೆ. ದೇಶಾದ್ಯಂತ ಕೋಲ್ಡ್ರೀಫ್ ಸಿರಪ್‌ನ ಮಾರಾಟ ನಿಷೇಧಿಸಲಾಗಿದ್ದು, ಜನರಿಗೆ ಈ ಬಗ್ಗೆ ಅರಿವು ಮೂಡಿಸಲಾಗಿದೆ ಎಂದರು.