ಬೆಂಗಳೂರು.20- ಸರ್ಕಾರ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಸಚಿವ ಸಂಪುಟದ ಸಭೆಯಲ್ಲಿ ಒತ್ತಾಯಿಸಿದರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಮಾವಿನ ಹಣ್ಣಿಗೆ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಪ್ರಸಿದ್ದಿಯಾಗಿದ್ದು ರೈತರು ನಿರ್ದಿಷ್ಟ ಬೆಲೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಈಗಾಗಲೇ ನೆರೆಯ ಆಂಧ್ರಪ್ರದೇಶ ಸರ್ಕಾರವು ನಮ ತೋತಾಪುರಿ ಮಾವಿನ ಹಣ್ಣಿನ ಮಾರಾಟಕ್ಕೆ ನಿರ್ಬಂಧ ವಿಧಿಸಿದ್ದು ಮಾವಿಗೆ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ.
ಈಗಾಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಮುಖ್ಯ ಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ನಮ ಸರ್ಕಾರವು ರೈತರ ಪರವಾಗಿದ್ದು ರೈತರಿಗೆ ಸಹಕಾರಿಯಾಗಲು ಬೆಂಬೆಲ ಬೆಲೆಯನ್ನು ನಿಗದಿಪಡಿಸಲು ಮುಖ್ಯಮಂತ್ರಿಗಳಿಗೆ ಒತ್ತಡ ಹೇರಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ದನಿಗೂಡಿಸಿದರು.