ಜನೌಷಧಿ ಕೇಂದ್ರಗಳು ಕಡ್ಡಾಯವಾಗಿ ಕಾರ್ಯ ನಿರ್ವಹಿಸಬೇಕು : ಸಚಿವ ಸುಧಾಕರ್

Social Share

ತುಮಕೂರು, ನ.17- ಜಿಲ್ಲಾ ಕೇಂದ್ರ ಸೇರಿದಂತೆ ತಾಲೂಕು ಕೇಂದ್ರಗಳಲ್ಲೂ ಕಡ್ಡಾಯವಾಗಿ ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸಬೇಕು. ಸಿಹೆಚ್‍ಸಿ ಮತ್ತು ಪಿಹೆಚ್‍ಸಿಗಳಿಗೂ ಸಹ ಜನೌಷ ಕೇಂದ್ರ ವಿಸ್ತರಣೆಯಾಗುವ ರೀತಿ ವೈದ್ಯರುಗಳು ಒತ್ತು ನೀಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಔಷಗಳು ಕೊರತೆಯಾಗದಂತೆ ನೋಡಿಕೊಳ್ಳಬೇಕು. ಔಷಧಿ ಕೊರತೆಗೆ ಸಂಬಂಸಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಇ-ಮೇಲ್ ಅಥವಾ ದೂರವಾಣಿ ಮೂಲಕ ತಿಳಿಸಬೇಕು.

ಸ್ಥಳೀಯವಾಗಿಯೂ ಸಹ ಔಷಗಳನ್ನು ಖರೀದಿಸಬಹುದು. ಆದರೆ ಖರೀದಿಗೆ ಸಂಬಂಸಿದಂತೆ ಈ-ಔಷಧ ಪೋರ್ಟಲ್‍ನಲ್ಲಿ ಇಂಡೆಂಟ್‍ಗಳನ್ನು ಅಪ್‍ಲೋಡ್ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 10 ನಮ್ಮ ಕ್ಲಿನಿಕ್ ಕೇಂದ್ರಗಳು ತೆರೆಯಲಾಗುತ್ತಿದ್ದು, ಆಯಾ ತಾಲ್ಲೂಕಿನಲ್ಲಿ ಶಾಸಕರು ಮತ್ತು ಜನಪ್ರತಿನಿಗಳಿಂದ ಉದ್ಘಾಟನೆ ಮಾಡಿಸಬೇಕು. ನಮ್ಮ ಕ್ಲಿನಿಕ್‍ಗೆ ಸಂಬಂಸಿದಂತೆ ಜನರಿಗೆ ಅರಿವು ಮೂಡಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಸಿ-ಸೆಕ್ಷನ್ ಹೆರಿಗೆ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತಂತೆ ಪರಿಶೀಲಿಸಲು ತಾಲ್ಲೂಕು ಮಟ್ಟದಲ್ಲಿ ಎಎಂಒ, ಅನಸ್ತೇಷಿಯಾ ತಜ್ಞರು ಮತ್ತು ಟಿಹೆಚ್‍ಒ ಒಳಗೊಂಡ ತಜ್ಞರು ಮತ್ತು ಜಿಲ್ಲೆಮಟ್ಟದಲ್ಲಿ ಜಿಲ್ಲೆ ಶಸ್ತಚಿಕಿತ್ಸಕರು, ಮತ್ತು ಆರ್‍ಎಂಒ ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರತಿ ಶುಕ್ರವಾರ ಎಲ್ಲಾ ವೈದ್ಯಕೀಯ ವಿಭಾಗದ ಮುಖ್ಯಸ್ಥರೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕು ಮತ್ತು ಯಾವುದಾದರೂ ಲೋಪದೋಷ ಕಂಡು ಬಂದಲ್ಲಿ ತಕ್ಷಣವೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು. ತಾಲೂಕು ಆರೋಗ್ಯ ಕೇಂದ್ರಗಳು ಮತ್ತು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಸರಿಯಾಗಿ ಅನುಷ್ಟಾನಗೊಳ್ಳುತ್ತಿವೆಯೇ ಎಂಬುದನ್ನು ಸಿಇಓ ರವರು ಪರಿಶೀಲಿಸಬೇಕು ಎಂದು ತಿಳಿಸಿದರು.

ಇರೋ ಬಸ್ಸುಗಳಿಗೆ ಚಾಲಕರಿಲ್ಲ, ಬಿಎಂಟಿಸಿಗೆ ಹೊಸ ಬಸ್ ಖರೀದಿ ಅವಶ್ಯಕತೆ ಏನಿತ್ತು.. ?

ಭ್ರಷ್ಟಾಚಾರ ಪ್ರಕರಣಗಳನ್ನು ತಡೆಯಲು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸಿಸಿ ಕ್ಯಾಮೆರಾ, ಸೂಚನಾ ಫಲಕ, ಕಂಪ್ಲೇಂಟ್ ಬಾಕ್ಸ್ ಗಳನ್ನು ತಕ್ಷಣವೇ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಇ-ಮೇಲ್ , ಸಹಾಯವಾಣಿ ಮೂಲಕ ಮತ್ತು ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಒ ಅವರಿಗೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಸಚಿವರು ತಿಳಿಸಿದರು.

ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ರಂದೀಪ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ವಿದ್ಯಾಕುಮಾರಿ ಸೇರಿದಂತೆ ಬೆಂಗಳೂರಿನ ಆಯುಕ್ತಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Articles You Might Like

Share This Article