ಬೆಂಗಳೂರು.ಫೆ.18- ನಾವು ಸಚಿವ ಕೆ.ಎಸï. ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ ಸಿಎಂ, ಗವನರರ್ ಈಶ್ವರಪ್ಪರನ್ನು ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ಧಿಗಾರರ ಜೊತೆ ಮಾತನಾಡಿದ ಅವರು ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ ನಾನು ಸಚಿವ ಕೆ.ಎಸï.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ.ಅವರು ದೊಡ್ಡ ಆಸ್ತಿವಂತ ಎಂದು ಬಿಜೆಪಿ ಸ್ವೀಕರಿಸುತ್ತಿದೆ. ಬಿಜೆಪಿಯವರಿಗೆ ರಾಷ್ಟ್ರಧ್ವಜ ಎಂದರೇನೇ ಗೊತ್ತಿಲ್ಲ ಎಂದು ಟೀಕಿಸಿದರು.
ಅವರು ನಮ್ಮ ತಂದೆ, ತಾಯಿ ಎಂದೆಲ್ಲ ಮಾತನಾಡುತ್ತಾರಲ್ಲ ನಾವು ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಲ್ಲ.
ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಹೋರಾಟ ಮುಂದುವರೆಸುತ್ತೇವೆ ªಎಲ್ಲ ತಾಲೂಕು ಕೇಂದ್ರಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಸಂದೇಶ ಕೊಡುತ್ತೇನೆ. ರಾಷ್ಟ್ರಧ್ವಜ ಹಿಡಿದು ಪ್ರತಿಭಟಿಸುವಂತೆ ಸಂದೇಶ ಕೊಡುತ್ತೇನೆ ಎಂದರು.
ಸದನದಲ್ಲಿ ಇಂದು ನಮ್ಮ ಧರಣಿ ಮುಂದುವರಿಯುತ್ತದೆ ಎಂದು ಡಿಕೆಶಿ ಗುಡುಗಿದರು
