ಬೆಳಗಾವಿ,ಜ.14-ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಿಗ್ಗೆ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸದ ಅಪಘಾತದಲ್ಲಿ ಅಚ್ಚರಿಯ ರೀತಿಯಲ್ಲಿ ಪ್ರಣಾಪಾಯದಿಂದ ಪರಾಗಿರುವ ಘಟನೆ ಇಲ್ಲಿಗೆ ಸಮೀಪ ಕಿತ್ತೂರಿನ ಅಂಬಡಗಟ್ಟಿ ಘಟ್ಟದ ಬಳಿ ಸಂಭವಿಸಿದೆ.
ಅಪಘಾತದಲ್ಲಿ ಸಚಿವೆ ಲಕ್ಷ್ನೀ ಹೆಬ್ಬಾಳಕರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನುಬೆಳಗಾವಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚೆನ್ನರಾಜ ಹಟ್ಟಿಹೊಳಿ ,ಗನ್‌ಮ್ಯಾನ್,ಕಾರು ಚಾಲಕರಿಗೆ ಸಣ್ಣಪುಟ್ಟ ಗಾಯಗಳಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಕಳೆದ ರಾತ್ರಿ ಬೆಂಗಳೂರಿನಲ್ಲಿ ನಡೆದ ಶಾಸಕಾಂಗ ಸಭೆ ಮುಗಿಸಿ ತಡರಾತ್ರಿ ರಸ್ತೆ ಮೂಲಕ ಬೆಳಗಾವಿಗೆ ಬರುತ್ತಿದ್ದ ವೇಳೆ ಬೆಳ್ಳಿಗ್ಗೆ 6 ಗಂಟೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ಕಾರಿಗೆ ಶ್ವಾನವೊಂದ ಅಡ್ಡ ಬಂದಿದ್ದು ಅದನ್ನು ತಪ್ಪಿಸಲು ಕಾರು ಚಾಲಕ ವಾಹನವನ್ನು ಸರ್ವಿಸ್ ರಸ್ತೆ ಕಡೆ ಹೋಗಿದ್ದು ಈ ವೇಳೆ ಇಳಿ ಚಾರಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಏರ್ ಬ್ಯಾಗ್ ತೆರೆದುಕೊಂಡು ಎಲ್ಲರು ಪಾರಾಗಿದ್ದಾರೆ.ಈ ಅಪಘಾತದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಕೂಡಾ ಗಾಯವಾಗಿದ್ದು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ.ಚಾಲಕ ಗಂಗಾಧರಯ್ಯ ಹಾಗು ಸಚಿವರ ಅಂಗರಕ್ಷಕನಿಗೂ ಚಿಕಿತ್ಸೆ ನೀಡಲಾಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇನ್ನು ಮೂರು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯಬೇಕಿದ್ದು ನಂತರ ವಿಶ್ರಾಂತಿ ಅಗತ್ಯ ಎಂದು ವೈದ್ಯರು ತಿಳಿಸಿದ್ದಾರೆ. ಸ್ಥಳಕ್ಕೆ ಐಜಿಪಿ ಚೇತನಸಿಂಗ್ ರಾಠೋಡ್ ಹಾಗೂ ಎಸ್ಪಿ ಡಾ. ಭೀಮಾಶಂಕರ ಗುಳೇದ ಭೇಟಿ ಪರಿಶೀಲಿಸಿದ್ದಾರೆ.ಸಂಕ್ರಾಂತಿ ಹಬ್ಬದಂದು ನಡೆದಿರುವ ಈ ಅಪಘಾತ ದೊಡ್ಡ ಪ್ರಮಾಣದಲ್ಲಿ ನಡೆದಿಲ್ಲವಾದರೂ ಅದೃಷ್ಠವಷಾತ್ ಎಲ್ಲರೂ ಪ್ರಣಾಪಾಯದಿಂದ ಪಾರಾಗಿದ್ದಾರೆ.