Friday, October 11, 2024
Homeರಾಜ್ಯಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ನ.17- ನಾಲ್ವರ ಹತ್ಯೆ ಪ್ರಕರಣದಿಂದ ಸಂಕಷ್ಟಕ್ಕೀಡಾಗಿರುವ ಕುಟುಂಬದ ಸದಸ್ಯರನ್ನು ಉಡುಪಿ ಜಿಲ್ಲೆಯ ಉಸ್ತುವಾರಿ ಹಾಗೂ ಮಹಿಳಾ-ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ.

ಈ ವೇಳೆ ಕುಟುಂಬದ ಸದಸ್ಯರು ಸಚಿವರಿಗೆ ಮನವಿ ನೀಡಿ ಪ್ರಕರಣವನ್ನು ತ್ವರಿತ ನ್ಯಾಯಾಲಯದಿಂದ ವಿಚಾರಣೆ ನಡೆಸಬೇಕು, ಸರ್ಕಾರಿ ಅಭಿಯೋಜಕರನ್ನಾಗಿ ಶಿವಪ್ರಸಾದ್ ಆಳ್ವರನ್ನು ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಜನನಿಭೀಡ ಪ್ರದೇಶದಲ್ಲಿ ನಡೆದ ಹತ್ಯೆ ಪ್ರಕರಣ ಜನ ಸಾಮಾನ್ಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಆಘಾತಕ್ಕೆ ಒಳದ ಸ್ಥಳೀಯರು ಕುಟುಂಬದ ಸದಸ್ಯರ ಜೊತೆಗೆ ಬೆಂಬಲವಾಗಿ ನಿಂತರು. ಸಂತ್ರಸ್ಥರಿಗೆ ನೀರು, ಶರಬತ್ತು ನೀಡಿ ಸಂತೈಸಲಾಯಿತು. ಪರಸ್ಪರ ಸೌಹಾರ್ದತೆಯಿಂದ ಘಟನೆಯನ್ನು ಜನ ನಿಭಾಯಿಸಿದ್ದಾರೆ. ಹಿಂದುಗಳು ದೀಪಾವಳಿಯನ್ನು ಆಚರಿಸದೆ ಶೋಕಾಚರಣೆ ಮಾಡಿದ್ದಾರೆ ಎಂದು ಸಚಿವರಿಗೆ ಸ್ಥಳಿಯ ಮುಖಂಡರು ವಿವರಿಸಿದರು.

ಮುಖ್ಯಮಂತ್ರಿ ಕಚೇರಿಯಿಂದ ಅಧಿಕಾರಿಗಳು ಹಾಗೂ ಗೃಹಸಚಿವರು ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ್ದಾರೆ. ಈಗ ಸರ್ಕಾರದ ಪ್ರತಿನಿಧಿಯಾಗಿ ನೀವು ಬಂದಿದ್ದೀರಿ, ಸಮಾಧಾನವಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಂತೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರ ನಿಮ್ಮ ಜೊತೆಗಿದೆ ಎಂದು ಕುಟುಂಬದ ಸದಸ್ಯರಿಗೆ ಭರವಸೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ ಜಿಲ್ಲೆ ಬೆಚ್ಚಿ ಬೀಳುವಂತಹ ಘಟನೆ ಆಗಿದೆ. ಕುಟುಂಬದ ನಾಲ್ಕು ಸದಸ್ಯರನ್ನು ಅಮಾನುಶವಾಗಿ ರಾಕ್ಷಸ ಪ್ರವೃತ್ತಿಯಿಂದ ಕೊಲೆ ಮಾಡಲಾಗಿದೆ. ಸರ್ಕಾರ ಕುಟುಂಬದವರ ಜೊತೆಯಲ್ಲಿದೆ. ಪೊಲೀಸರು 60 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಕುಟುಂಬದ ಸದಸ್ಯರಿಗೆ ಆದಷ್ಟು ಬೇಗ ನ್ಯಾಯ ದೊರಕಿಸಲು ಸಾಧ್ಯ ಇರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

ಆರೋಪಿಯನ್ನು ನೋಡಿದರೆ ಸೈಕೋ ಥರಾ ಇದ್ದಾನೆ. ಮೊದಲನೇ ಮದುವೆಯಾಗಿದ್ದ ಆತನಿಗೆ ಎರಡು ಮಕ್ಕಳಿವೆ. ಸೈಕೋ ಕ್ಲಿಲರ್ ಥರಾ ಬಂದು 20 ನಿಮಿಷದಲ್ಲಿ ಕೊಲೆ ಮಾಡಿದ್ದಾನೆ ಎಂದರೆ ಆತನ ಮಾನಸಿಕ ಸ್ಥಿತಿ ಎಷ್ಟು ಕ್ರೋರವಾಗಿತ್ತು ಎಂದು ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಆರೋಪಿ ಕೊಲೆ ಮಾಡಿ ಬೆಳಗಾವಿ ಜಿಲ್ಲೆಯ ಕುಡಚಿಯಲ್ಲಿನ ನೀರಾವರಿ ಇಲಾಖೆಯ ಮಾಜಿ ಅಧಿಕಾರಿ ಮನೆಯಲ್ಲಿ ಅಡಗಿಕೊಂಡಿದ್ದ. ಕೃತ್ಯದ ಬಗ್ಗೆ ಆಶ್ರಯ ನೀಡಿದ ಮನೆಯವರಿಗೆ ತಿಳಿದಿರಲಿಲ್ಲ. ಆತನ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇರಲಿಲ್ಲ ಎಂದು ಹೇಳಿದರು. ಪ್ರಕರಣವನ್ನು ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು. ಸರ್ಕಾರಿ ಅಭಿಯೋಜಕರ ನೇಮಕ ಕುರಿತಂತೆ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ. ಸರ್ಕಾರ ಕಾನೂನಾತ್ಮಕ ನೆಲೆಯಲ್ಲಿ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

ಮುಸ್ಲಿಂ ಖಾದರ್‌ಗೆ ಬಿಜೆಪಿಯ ದೊಡ್ಡ ನಾಯಕರು ನಮಸ್ಕರಿಸುತ್ತಾರೆ : ಸಚಿವ ಜಮೀರ್

ಉಡುಪಿ ಜಿಲ್ಲೆಯ ಜನ ಶಾಂತಿ ಪ್ರಿಯರು, ಜನವಸತಿ ಪ್ರದೇಶದಲ್ಲಿ ಘಟನೆ ನಡೆದಿರುವುದು ಆಘಾತ ಮೂಡಿಸಿದೆ. ಮುಂದಿನ ದಿನಗಳಲ್ಲಿ ಇಂತಹದ್ದಕ್ಕೆ ಅವಕಾಶವಾಗದಂತೆ ಎಚ್ಚರಿಕೆ ವಹಿಸಲಾಗುವುದು. ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆ ಸೇರಿದಂತೆ ಎಲ್ಲಾ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ, ಎಸ್‍ಪಿ ಅವರಿಗೆ ಸೂಚಿಸುತ್ತೇನೆ. ಘಟನೆಯಾದ ತಕ್ಷಣ ನಾನು ಸ್ಥಳಕ್ಕೆ ಬರಲಿಲ್ಲ ಎಂಬುದಕ್ಕೆ ಹೆಚ್ಚಿನ ಮಹತ್ವ ನೀಡಬಾರದು. ನಾನು ಅಂದು ಬೆಳಗಾವಿಯಲ್ಲಿ ಇದ್ದೆ, ಬೆಳಗಾವಿಯಿಂದ ಉಡುಪಿಗೆ ರೈಲು ಅಥವಾ ವಿಮಾನದ ಸೌಲಭ್ಯ ಇಲ್ಲ. ನಾನು ಎಲ್ಲೇ ಇದ್ದರೂ ಜಿಲ್ಲಾಡಳಿತ ಹಾಗೂ ಕುಟುಂಬದ ಸದಸ್ಯರ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ಜವಾಬ್ದಾರಿ ನಿಭಾಯಿಸಿದ್ದೇನೆ. ನಿನ್ನೆ ಸಚಿವ ಸಂಪುಟ ಸಭೆ ಮುಗಿಸಿದ ಬಳಿಕ ಇಂದು ಇಲ್ಲಿಗೆ ಆಗಮಿಸಿದ್ದೇನೆ ಎಂದರು.

ಬಳಿಕ ಸಚಿವರು ಉಡುಪಿಯ ಗಂಗೊಳ್ಳಿಯ ಬಂದರಿನಲ್ಲಿ ಅಗ್ನಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಗ್ನಿ ಆಕಸ್ಮಿಕ ನಡೆದಲ್ಲೇ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮೀನುಗಾರರೊಂದಿಗೆ ಚರ್ಚೆ ನಡೆಸಿದರು.

9 ಬೋಟ್‍ಗಳು, ಎರಡು ದೋಣಿಗಳು ಸಂಪೂರ್ಣ ಸುಟ್ಟಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲಾಗುವುದು. ಅಗ್ನಿ ದುರಂತದಿಂದ ಸುಮಾರು 13 ರಿಂದ 15 ಕೋಟಿ ರೂ ನಷ್ಟ ಅಂದಾಜಿಸಲಾಗಿದೆ. ಇನ್ನು 15 ದಿನಗಳಲ್ಲಿ ಪರಿಹಾರ ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ

ಮುಂದೆ ಇಂತಹ ದುರ್ಘಟನೆ ಮರುಕಳಿಸಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ ಶಾಮಕ ದಳ ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಜಿಲ್ಲಾಕಾರಿ ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಮುಖಂಡರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು.

RELATED ARTICLES

Latest News