Monday, November 4, 2024
Homeರಾಜಕೀಯ | Politicsವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ರಾಜಕೀಯ : ಸಚಿವ ಎಂ.ಬಿ ಪಾಟೀಲ ಕಿಡಿ

ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ರಾಜಕೀಯ : ಸಚಿವ ಎಂ.ಬಿ ಪಾಟೀಲ ಕಿಡಿ

Minister M. B. Patil sparks BJP politics on Waqf property issue

ಬೆಂಗಳೂರು,ಅ.29- ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಕೆಟ್ಟ ರಾಜಕಾರಣ ಮಾಡುತ್ತಿದೆ. ಆದರೆ 2019ರಿಂದ 2022ರವರೆಗೆ ರಾಜ್ಯದಲ್ಲಿ ಅವರದೇ ಸರ್ಕಾರವಿದ್ದಾಗ ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್ ಮಂಡಳಿ ಮೂಲಕ ನೋಟೀಸ್‌‍ ಕೊಡಲಾಗಿತ್ತು. ಆಗ ಇರದ ಹಿಂದೂ ಪ್ರೇಮವನ್ನು ಈಗ ಕಪೋಲಕಲ್ಪಿತ ಸುಳ್ಳುಗಳ ಮೂಲಕ ವ್ಯಕ್ತಪಡಿಸಲಾಗುತ್ತಿದೆ ಎಂದು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ .ಪಾಟೀಲ ಹೇಳಿದ್ದಾರೆ.

ಈ ಸಂಬಂಧವಾಗಿ ಅವರು ಬಿಜೆಪಿ ಆಡಳಿತದ ಕಾಲದ ನೋಟೀಸ್‌‍ಗಳೊಂದಿಗೆ, ತೀಕ್ಷ್ಣ ಸಂದೇಶ ಹಾಕಿದ್ದಾರೆ. ಬಿಜೆಪಿಯವರು ತಮದೇ ಸರ್ಕಾರವಿದ್ದಾಗ ರಾಜ್ಯದ ಅಭಿವೃದ್ಧಿಯನ್ನು ಮರೆತು ಹಿಜಾಬ್‌‍, ಹಲಾಲ್‌‍, ಉರೀಗೌಡ-ನಂಜೇಗೌಡ ಎಂದು ನಾಟಕವಾಡಿದರು. ಈಗ ವಕ್ಫ್ ಆಸ್ತಿ ಹೆಸರಿನಲ್ಲಿ ಆ ನಾಟಕವನ್ನು ಮುಂದುವರಿಸಲಾಗುತ್ತಿದೆ.

ಸುಳ್ಳಿನ ಕಂತೆ ಕಟ್ಟಿ ಜನರ ಕಣ್ಣಿಗೆ ಮಣ್ಣೆರಚುವ ಇವರ ಕುತಂತ್ರ ಇಲ್ಲಿ ನಡೆಯುವುದಿಲ್ಲ ಎಂದು ಅವರು ಕುಟುಕಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ರಚಿಸಿರುವ ಸತ್ಯ ಶೋಧನಾ ಸಮಿತಿಯನ್ನು ಅವರದೇ ಪಕ್ಷದ ಬಸನಗೌಡ ಪಾಟೀಲ ಯತ್ನಾಳ ಅವರು ಹಿಗ್ಗಾಮುಗ್ಗಾ ಟೀಕಿಸಿದ ಮೇಲೆ ಪುನರ್‌ ರಚಿಸಲಾಗಿದೆ. ಇಷ್ಟೆಲ್ಲ ಆದ ಮೇಲೆ ಯತ್ನಾಳ್‌ ಜೊತೆಗೆ ಸಂಸದ ರಮೇಶ ಜಿಗಜಿಣಗಿ ಅವರುಗಳನ್ನು ಸೇರಿಸಿದಂತೆ ನಟಿಸಲಾಗಿದೆ. ಇದು ಆ ಪಕ್ಷದ ದುಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಇದನ್ನು ಬಿಟ್ಟು, ತಮ ಸರ್ಕಾರದ ಅವಧಿಯಲ್ಲಿ ನಮ ರೈತರಿಗೆ ಕೊಟ್ಟ ನೋಟೀಸ್‌‍ಗಳಿಗೆ ಮೊದಲು ಉತ್ತರ ಕೊಡಲಿ ಎಂದು ಅವರು ಆಗ್ರಹಿಸಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ಹೇಳಿ ಯಾವ ರೈತರಿಗೂ ನೋಟಿಸ್‌‍ ಕೊಟ್ಟಿಲ್ಲ. ಇಲ್ಲದ ಸಮಸ್ಯೆಯನ್ನು ಹುಟ್ಟುಹಾಕುತ್ತಿರುವ ಬಿಜೆಪಿ ನಾಯಕರು ತಮ ನಡುವೆ ಇರುವ ಸಮಸ್ಯೆಗಳನ್ನು ಮೊದಲು ಬಗೆಹರಿಸಿಕೊಳ್ಳಲಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

RELATED ARTICLES

Latest News