Sunday, February 25, 2024
Homeರಾಜ್ಯಸಚಿವ ಮಧುಬಂಗಾರಪ್ಪ ಕಾರು ಅಪಘಾತ, ತಪ್ಪಿದ ದುರಂತ

ಸಚಿವ ಮಧುಬಂಗಾರಪ್ಪ ಕಾರು ಅಪಘಾತ, ತಪ್ಪಿದ ದುರಂತ

ತುಮಕೂರು,ಡಿ.28- ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ತಾಲ್ಲೂಕಿನ ನಂದಿಹಳ್ಳಿ ಬಳಿಯ ಮೇಲ್ಸೇತುವೆಯ ಬಳಿ ತಡರಾತ್ರಿ 11 ಗಂಟೆ ಸಮಯದಲ್ಲಿ ನಡೆದಿದೆ. ಅದೃಷ್ಟವಶಾತ್ ಮಧು ಬಂಗಾರಪ್ಪ ಸೇರಿದಂತೆ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಚಿವರು ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು ಯಾರಿಗೂ ಯಾವುದೇ ಅಪಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಬದಲಿಕಾರಿನ ವ್ಯವಸ್ಥೆ ಮಾಡಿಕೊಂಡು ಮಧು ಬಂಗಾರಪ್ಪ ಅವರು ಬೆಂಗಳೂರಿಗೆ ತೆರಳಿದರು. ಕ್ಯಾತ್ಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಸಚಿವರಿಗೆ ಭದ್ರತೆ ನೀಡಿ ಸುರಕ್ಷಿತವಾಗಿ ಬೆಂಗಳೂರಿಗೆ ಕಳುಹಿಸಿದ್ದಾರೆ.

ಉತ್ತರ ಭಾರತದಲ್ಲಿ ಕವಿದ ಮಂಜು, 134 ವಿಮಾನ, 22 ರೈಲು ಸಂಚಾರದಲ್ಲಿ ವ್ಯತ್ಯಯ

ಲಾರಿಯನ್ನು ರಸ್ತೆಯಿಂದ ತೆರವುಗೊಳಿಸಿ ಕೆಲ ಕಾಲ ಉಂಟಾಗಿದ್ದ ಸಂಚಾರ ವ್ಯತ್ಯಯ ಸರಿಪಡಿಸಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಲಾರಿ ಗುಜರಾತ್‍ನಿಂದ ಬೆಂಗಳೂರಿಗೆ ಟೈಲ್ಸ್ ತೊಂಬಿಕೊಂಡು ಹೋಗುತ್ತಿತ್ತು.ಪ್ರಸ್ತುತ ಚಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

RELATED ARTICLES

Latest News