Thursday, November 21, 2024
Homeರಾಜ್ಯ500 ಕರ್ನಾಟಕ ಪಬ್ಲಿಕ್‌ ಶಾಲೆಗಳ ಅನುಷ್ಠಾನ : ಮಧು ಬಂಗಾರಪ್ಪ

500 ಕರ್ನಾಟಕ ಪಬ್ಲಿಕ್‌ ಶಾಲೆಗಳ ಅನುಷ್ಠಾನ : ಮಧು ಬಂಗಾರಪ್ಪ

ಬೆಂಗಳೂರು,ನ.1-ಕಾರ್ಪೊರೇಟ್‌ ಸಂಸ್ಥೆಗಳ ಸಿಎಸ್‌‍ಆರ್‌ ಮಿತಿಯಡಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಹಾಗೂ ಗ್ರೀನ್‌ಫೀಲ್‌್ಡ ಯೋಜನೆಯಡಿ 100 ಶಾಲೆಗಳನ್ನು ಗುರುತಿಸಿ, ಯೋಜನೆಯನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ತಿಳಿಸಿದರು. ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಹಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರ್ಕಾರಿ ಶಾಲೆಯ ಗುಣಾತಕ ಶಿಕ್ಷಣಕ್ಕಾಗಿ ಕಲಿಕಾ ಬಲವರ್ಧನೆ, ಮರುಸಿಂಚನ, ಕಲಿಕಾಸರೆ, ಗಣಿತ ಗಣಕ ಮುಂತಾದ ಕಾರ್ಯಕ್ರಮಗಳನ್ನು ಹಮಿಕೊಳ್ಳಲಾಗಿದೆ ಎಂದರು.

ಈ ಸಂಬಂಧ ಹಲವಾರು ಸಂಘ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಮಕ್ಕಳ ಶಾಲಾ ಹೊರೆ ಇಳಿಸಲು ಪಠ್ಯಪುಸ್ತಕಗಳನ್ನು ಸೆಮಿಸ್ಟರ್‌ನಂತೆ ವಿಭಾಗಿಸಲಾಗಿದೆ ಎಂದು ಅವರು ಹೇಳಿದರು. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಉತ್ತಮ ಗುಣಮಟ್ಟದ ಶಾಲಾ ಶಿಕ್ಷಣವನ್ನು ನೀಡಲು ಸತತ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಪ್ರಥಮ ಹಾಗೂ ದ್ವಿತೀಯ ಭಾಷೆಯನ್ನಾಗಿ ಬೋಧಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಕ್ಕಳಲ್ಲಿ ಪೋಷಕಾಂಶಗಳನ್ನು ಹೆಚ್ಚಿಸುವ ಸಲುವಾಗಿ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು, ಹಾಲು, ರಾಗಿಮಾಲ್ಟನ್ನು ನೀಡಲಾಗುತ್ತಿದೆ ಎಂದು ಹೇಳಿದರು. ನಮ ಶಾಲೆ ನಮ ಜವಾಬ್ದಾರಿ ಎಂಬ ಕಾರ್ಯಕ್ರಮದ ಮೂಲಕ ಪ್ರತಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಸ್ಥಾಪಿಸಿದ್ದು, ಅಪಾರ ಸಂಖ್ಯೆಯಲ್ಲಿ ಮುಂದೆ ಬಂದಿದ್ದಾರೆ. ಈಗ ಉತ್ಸಾಹದಿಂದ ಶಾಲಾ ಅಭಿವೃದ್ಧಿಯಲ್ಲಿ ಸಮುದಾಯದ ನಾಗರಿಕರು ಕೈ ಜೋಡಿಸುತ್ತಿದ್ದಾರೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಉತ್ತಮಪಡಿಸಲು 784 ಕೊಠಡಿಗಳನ್ನು 115 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಶಾಲೆಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಶೌಚಾಲಯಗಳ ನಿರ್ಮಾಣಕ್ಕಾಗಿ 122.75 ಕೋಟಿ ರೂ. ಮಂಜೂರು ಮಾಡಲಾಗಿದೆ. ರಾಜ್ಯದ 5,716 ಶಾಲೆಗಳ 13,832 ಕೊಠಡಿಗಳ ದುರಸ್ತಿಗಾಗಿ 150 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ನಾಡಿನ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಅವರಲ್ಲಿ ಆತವಿಶ್ವಾಸ, ಭ್ರಾತೃತ್ವ, ಸಹಬಾಳ್ವೆ, ಸಹಕಾರ, ಪರಿಸರ ಕಾಳಜಿ ಮೂಡಿಸಲಾಗುತ್ತಿದೆ ಎಂದರು.

ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ 42,817 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಕ್ಷರ ಆವಿಷ್ಕಾರ ಯೋಜನೆಯಡಿಯಲ್ಲಿ 1008 ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. 36,658 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಭಾರತದ ಇತಿಹಾಸದಲ್ಲಿ ಸ್ವಾತಂತ್ರ್ಯ ಸಂಗ್ರಾಮಕ್ಕೆ ದೊರೆತಿರುವ ಮಹತ್ವದಂತೆ ಕರ್ನಾಟಕದ ಇತಿಹಾಸದಲ್ಲಿ ಕರ್ನಾಟಕ ಏಕೀಕರಣಕ್ಕಾಗಿ ನಡೆದ ಚಳವಳಿಯು ಮಹತ್ವ ಪಡೆದಿದೆ. 1956ರ ನ.1 ರಂದು ಮೈಸೂರು ರಾಜ್ಯ ಅಸ್ತಿತ್ವಕ್ಕೆ ಬಂದಿತು. 1973 ರಲ್ಲಿ ಅದು ಕರ್ನಾಟಕ ಎಂದು ಮರುನಾಮಕರಣಗೊಂಡಿತು. ಇದರ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಏಕೀಕರಣಕ್ಕಾಗಿ ಶ್ರಮಿಸಿದ ಹಲವಾರು ಮಹನೀಯರನ್ನು ಕೃತಜ್ಞತೆಯಿಂದ ಸರಿಸಬೇಕಾಗಿದೆ ಎಂದು ಅವರು ಹೇಳಿದರು.

RELATED ARTICLES

Latest News