ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ : ಸಚಿವ ಮಧು ಬಂಗಾರಪ್ಪ

ಬೆಂಗಳೂರು,ಮಾ.9- ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಗೆದ್ದೇ ಗೆಲ್ಲಲಿದೆ, ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಯವರಿಗೂ ಗೆಲುವು ಸುಲಭವಲ್ಲ ಎಂಬುದನ್ನು ಮರೆಯಬಾರದು ಎಂದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್‍ಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ಪಕ್ಷದ ತೀರ್ಮಾನ. ಅವರನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಪಕ್ಷದ ಎಲ್ಲರ ಮೇಲೂ ಇದೆ. ಅದನ್ನು ನಾವು … Continue reading ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತೆ : ಸಚಿವ ಮಧು ಬಂಗಾರಪ್ಪ