Thursday, January 9, 2025
Homeರಾಜ್ಯಸಾರಿಗೆ ದರ ಏರಿಕೆಯನ್ನು ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ದರ ಏರಿಕೆಯನ್ನು ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ

Minister Ramalinga Reddy defends transport fare hike

ಬೆಂಗಳೂರು,ಜ.3– ನಾವು ಬಸ್ ದರ ಹೆಚ್ಚಿಸಿರುವುದು ಎಲ್ಲದಕ್ಕಿಂತ ಕಡಿಮೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನೋಡಿದರೆ ನಮ ರಾಜ್ಯದಲ್ಲೇ ಕಡಿಮೆ ಇದೆ ಹಾಗೂ ಉತ್ತಮ ಸಾರಿಗೆ ವ್ಯವಸ್ಥೆಯಲ್ಲಿ ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ನಂಬರ್ 1 ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಬಸ್ ದರ ಹೆಚ್ಚಳವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದಕ್ಕೆ ತಿರುಗೇಟು ನೀಡಿರುವ ರಾಮಲಿಂಗಾರೆಡ್ಡಿ ಅವರು, ಬಿಜೆಪಿಯವರು ಮಾಡಿರುವ ಆಡಳಿತ ಲೋಪದಿಂದ ಈಗ ನಮ ತಲೆ ಮೇಲೆ 5900 ಕೋಟಿ ಸಾಲ ಇಟ್ಟು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯವರು ಜನರಿಗೆ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಅಧಿಕಾರದಲ್ಲಿದ್ದಾಗ ಜನರನ್ನು ಅಭಿವೃದ್ಧಿಯನ್ನು ಮರೆತ್ತಿದ್ದರು. ಕೇಂದ್ರ ಸರ್ಕಾರದಲ್ಲಿರುವ ಬಿಜೆಪಿ ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್, ಡೀಸೆಲ್ ಬೆಲೆ ಕಳೆದ 9 ವರ್ಷಗಳಿಂದ ಕಡಿಮೆ ಮಾಡಿಲ್ಲ. ಇದೇ ಬಿಜೆಪಿ ತಾನು ಆಡಳಿತದಲ್ಲಿದ್ದಾಗ 2020ರಲ್ಲಿ ಬಸ್ ದರ ಹೆಚ್ಚಳ ಮಾಡಿದರು. ಆಗ ಅವರಿಗೆ ಜನರ ತೊಂದರೆ ತಿಳಿಯಲಿಲ್ಲವೇ ? ಎಂದು ಪ್ರಶ್ನೆ ಮಾಡಿದ್ದಾರೆ.
ಡಾಲರ್ ಬೆಲೆ ಕಡಿಮೆಯಾದರೂ ಪೆಟ್ರೋಲ್ ಡೀಸೆಲ್ ಬೆಲೆ ಕಡಿಮೆ ಮಾಡಲಿಲ್ಲ. ಆಗ ಜನರ ಕಷ್ಟ ಬಿಜೆಪಿಯವರಿಗೆ ತಿಳಿಯಲಿಲ್ಲವೇ. ಬಡಜನರ ಗ್ಯಾಸ್ ಸಬ್ಸಿಡಿಯನ್ನು ನಿಲ್ಲಿಸಿದರು. ಆಗ ಬಿಜೆಪಿ ಅವರಿಗೆ ಜನರ ಕಷ್ಟ ತಿಳಿಯಲಿಲ್ಲವೇ? ಎಂದು ಕಿಡಿಕಾರಿದ್ದಾರೆ.

ಅಧಿಕಾರದಲ್ಲಿದ್ದಾಗ ಒಳ್ಳೆ ಆಡಳಿತ ನೀಡಿ ನಾಲ್ಕೂ ನಿಗಮಗಳನ್ನು ಅಭಿವೃದ್ಧಿ ಮಾಡಲು ಪ್ರಯತ್ನಿಸಿದ್ದರೆ ಈ ತೊಂದರೆ ನಮಗೆ ಬರುತ್ತಿರಲಿಲ್ಲ ಎಂದು ಬಿಜೆಪಿಯನ್ನು ಕಿಚಾಯಿಸಿದ್ದಾರೆ.
ಬಸ್ ಖರೀದಿ, ವೇತನ ಪರಿಷ್ಕರಣೆ ನೇಮಕಾತಿ, ಎಲ್ಲವನ್ನೂಸಮಯ ತಕ್ಕನಾಗಿ ಮಾಡಿದರೆ ಇವಾಗ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯವರಿಗೆ ಮುಂಚೆನೇ ತಿಳಿದಿತ್ತೋ ಏನೋ? 2023ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಅಧಿಕಾರಿಕ್ಕೆ ಬರುವುದಿಲ್ಲವೆಂದು ಈ ರೀತಿಯ ಎಲ್ಲ ಕೆಟ್ಟ ಆಡಳಿತ ನಡೆಸಿ ನಮ ತಲೆ ಮೇಲೆ ಕಟ್ಟಿದ್ದಾರೆ ಎಂದು ದೂರಿದ್ದಾರೆ.

ಈಗಲಾದರೂ ಬಿಜೆಪಿಯವರು ಸುಳ್ಳು ಹೇಳಿ ತನ್ನ ಫೇಕ್ ವಾಟ್ಸಾಪ್ ಸೋಷಿಯಲ್ ಮೀಡಿಯಾ ಯೂನಿವರ್ಸಿಟಿಯಿಂದ ಜನರ ದಾರಿ ತಪ್ಪಿಸುವುದನ್ನು ಬಿಡಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

RELATED ARTICLES

Latest News