ಬೆಂಗಳೂರು,ಸೆ.16- ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯಗಳು ಬೆಂಬಲ ನೀಡಿವೆ. ಹೀಗಾಗಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಅಥವಾ ಸೃಷ್ಟಿಸಬಾರದು ಎಂಬುದನ್ನು ಹೈಕಮಾಂಡ್ ನಿರ್ಧರಿಸಲಿದೆ. ಅದರ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಮುಖ್ಯಮಂತ್ರಿ ಅಧಿಕಾರವಾದಿಯ ಕುರಿತಂತೆಯೂ ತಾವು ಚರ್ಚೆ ಮಾಡಲು ಬಯಸುವುದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ 2013 ರಿಂದ 2018 ರವರೆಗೆ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪ್ರಣಾಳಿಕೆ ನೀಡಿದ್ದ 165 ಭರವಸೆಗಳನ್ನು ಈಡೇರಿಸಿದ್ದರು.
ಗೌರಿ-ಗಣೇಶ ಹಬ್ಬಕ್ಕೆ ಊರಿನತ್ತ ಹೋರಟ ಜನ, ಬೆಂಗಳೂರಲ್ಲಿ ಬಸ್‌ಗಳಿಗಾಗಿ ನೂಕುನುಗ್ಗಲು
ಪ್ರಸಕ್ತ ವರ್ಷ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಪಂಚಖಾತ್ರಿ ಯೋಜನೆಗಳು ಸೇರಿದಂತೆ 135 ಭರವಸೆಗಳನ್ನು ನೀಡಿವೆ. ಅದನ್ನು ಈಡೇರಿಸುವುದು ನಮ್ಮ ಆದ್ಯತೆ. ಈಗಾಗಲೇ ಪಂಚಖಾತ್ರಿ ಯೋಜನೆಗಳನ್ನು ನಾಲ್ಕು ಜಾರಿಯಾಗಿವೆ. ಬಾಕಿ ಉಳಿದಿರುವುದನ್ನು ಮುಂದೆ ಅನುಷ್ಠಾನಕ್ಕೆ ತರುತ್ತೇವೆ ಎಂದರು.
ಇನ್ನುಳಿದಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಯಾವುದೇ ಹುದ್ದೆಗಳ ಬಗ್ಗೆ ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.
#Minister, #Ramalingareddy, #DCMPost,