Friday, November 22, 2024
Homeರಾಜ್ಯಡಿಸಿಎಂ ರೇಸ್ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೆಸರು ಮುನ್ನಲೆಗೆ

ಡಿಸಿಎಂ ರೇಸ್ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೆಸರು ಮುನ್ನಲೆಗೆ

ಬೆಂಗಳೂರು, ಡಿ.30- ರಾಜ್ಯದಲ್ಲಿ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂಬ ಬೇಡಿಕೆ ಹೆಚ್ಚಾದ ಬೆನ್ನಲ್ಲೇ, ಇದೀಗ ವೀರಶೈವ ಲಿಂಗಾಯತ ಕೋಟಾದಲ್ಲಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಹೆಸರು ಮುನ್ನಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಹಾಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ , ಜೀವನೋಪಾಯ ಹಾಗೂ ರಾಯಚೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಶರಣ ಪ್ರಕಾಶ್ ಪಾಟೀಲ್ ವಿವಾದರಹಿತ ರಾಜಕಾರಣಿ ಎಂದೇ ಗುರುತಿಸಿಕೊಂಡವರು.

ಪಕ್ಷದ ಶಿಸ್ತಿನ ಸಿಪಾಯಿ, ನಿಷ್ಕಳಂಕ ರಾಜಕಾರಣಿ ಎಂದು ಕರೆಯಲ್ಪಡುವ ಡಾ.ಶರಣ್ ಪ್ರಕಾಶ್ ಪಾಟೀಲ್, ಕಲ್ಯಾಣ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಎಂ.ಮಲ್ಲಿಕಾರ್ಜುನ ಖರ್ಗೆ ಅವರ ನಿಕಟವರ್ತಿಗಳಲ್ಲಿ ಒಬ್ಬರಾಗಿರುವ ಶರಣ ಪ್ರಕಾಶ್ ಪಾಟೀಲ್, ಸಚಿವರಾಗಿ ಹಲವು ಖಾತೆಗಳನ್ನು ನಿಭಾಯಿಸಿದ್ದಾರೆ.

ರಕ್ಷಣಾ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಯಾದ ಸಮೀರ್ ಕುಮಾರ್ ನೇಮಕ

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರದಲ್ಲಿ ಚರ್ಚೆ ನಡೆಯುತ್ತಿರುವ ಹಂತದಲ್ಲಿ ಶರಣ ಪ್ರಕಾಶ್ ಪಾಟೀಲ್ ಅವರನ್ನು ಪರಿಗಣಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೂಗೆದ್ದಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಿದರೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂಬ ಚರ್ಚೆಯೂ ಆರಂಭವಾಗಿದೆ. ಈ ಭಾಗದಲ್ಲಿ ವೀರಶೈವ ಲಿಂಗಾಯತ ಮತಗಳು ಅಭ್ಯರ್ಥಿಗಳ ಸೋಲು – ಗೆಲುವಿನಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುವುದರಿಂದ ಇದೇ ಸಮುದಾಯಕ್ಕೆ ಸೇರಿದ ಪ್ರಭಾವಿ ಸಚಿವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡಲಿವೆ. ಒಟ್ಟು 5 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಭಾಗದಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗಿತ್ತು. ಇತ್ತೀಚೆಗೆ ಕಳೆದ ಮೇ ತಿಂಗಳಿನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿ ಅಭೂತಪೂರ್ವ ಯಶಸ್ಸು ಕಂಡಿತ್ತು. 2024 ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕನಿಷ್ಠ ಪಕ್ಷ 25 ಕ್ಷೇತ್ರಗಳನ್ನು ಗೆದ್ದು ಎಐಸಿಸಿಗೆ ಭರ್ಜರಿ ಉಡುಗೊರೆ ನೀಡುವ ಲೆಕ್ಕಾಚಾರದಲ್ಲಿ ಕೆಪಿಸಿಸಿಗೆ ಇದೆ. ಇದು ಸಾಧ್ಯವಾಗಬೇಕಾದರೆ ರಾಜ್ಯದಲ್ಲಿ ಅತ್ಯಂತ ಪ್ರಭಾವಿ ಸಮುದಾಯ ಎನಿಸಿದ ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲೂ ಕೇಳಿ ಬರುತ್ತಿದೆ.

ಜ.17ರಂದು ರಾಮ್‍ಲಲ್ಲಾ ವಿಗ್ರಹ ವೀಕ್ಷಣೆಗೆ ಅವಕಾಶ

ಹಾಗೊಂದು ವೇಳೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡುವುದಾದರೆ ಅದಕ್ಕೆ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರನ್ನು ಪರಿಗಣಿಸಬೇಕು ಎಂಬ ಹಕ್ಕೊತ್ತಾಯಗಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆಗೂ ಅವಿನಾಭಾವ ಸಂಬಂಧ ಹೊಂದಿರುವ ಶರಣ ಪ್ರಕಾಶ್ ಪಾಟೀಲ್ ವಿಷಯವಾಗಿ ರಾಜಕೀಯ ವಿರೋಧಿಗಳು ಕಡಿಮೆ.

ಈ ಹಿಂದೆ ವೈದ್ಯಕೀಯ ಶಿಕ್ಷಣ ಖಾತೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಕಾರಣಕ್ಕಾಗಿ ಈ ಬಾರಿ ಅತ್ಯಂತ ಮಹತ್ವದ್ದಾದ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯ ಜವಾಬ್ದಾರಿಗಳನ್ನು ಸಿದ್ದರಾಮಯ್ಯನವರು ಶರಣ ಪ್ರಕಾಶ್ ಪಾಟೀಲ್ ಅವರಿಗೆ ವಹಿಸಿದ್ದರು. ಇದೀಗ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಟೊಂಕ ಕಟ್ಟಿ ನಿಂತಿದ್ದಾರೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಯುವನಿಧಿ ಯೋಜನೆ ಅನುಷ್ಠಾನವಾಗಲಿದೆ.

RELATED ARTICLES

Latest News