ಮುಜರಾಯಿ ವ್ಯಾಪ್ತಿಯದೇವಸ್ಥಾನಗಳಿಗೆ ಅನುದಾನ ಬಿಡುಗಡೆ : ಸಚಿವೆ ಶಶಿಕಲಾ ಜೊಲ್ಲೆ

Social Share

ಬೆಂಗಳೂರು,ಮಾ.7- ಹಣಕಾಸಿನ ಲಭ್ಯತೆ ನೋಡಿಕೊಂಡು ಮುಜರಾಯಿ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಯಲ್ಲಿ ಶಾಸಕ ಆನಂದ್ ಸಿದ್ದುನಾಮೆಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಹುತೇಕ ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಹಣಕಾಸಿನ ಲಭ್ಯತೆ ನೋಡಿಕೊಂಡು ಅನುದಾನ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಯೂ ೀ ಕುರಿತು ಚರ್ಚಿಸಿ ಹಣ ಬಿಡುಗಡೆ ಮಾಡುವ ಆಶ್ವಾಸನೆ ನೀಡಿದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇವಸ್ಥಾನಗಳಿಗೆ ಹೆಚ್ಚಿನ ಅನುದಾನವನ್ನು ನೀಡಿದೆ.
ಪ್ರಸಕ್ತ ಸಾಲಿನ ಬಜೆಟ್‍ನಲ್ಲೂ ದೇವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಿಎಂ ವಿಶೇಷ ಅನುದಾನ ಪ್ರಕಟಿಸಿದ್ದಾರೆ. ಇದನ್ನು ಬಳಸಿಕೊಂಡು ದೇವಾಲಯಗಳ ಅಭಿವೃದ್ದಿಗೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿದೆ ಎಂದರು. ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ ಮಧ್ಯಪ್ರವೇಶಿಸಿ ಕಳೆದ ಎರಡು ವರ್ಷಗಳ ಅವಯಲ್ಲಿ ನಾನು ನನ್ನ ಕ್ಷೇತ್ರ ವ್ಯಾಪ್ತಿಗೆ ಬರುವ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದೇನೆ.
ಕೆಲವು ಕ್ಷೇತ್ರಗಳಿಗೆ ಮಾತ್ರ ಬಿಡುಯಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜೊಲ್ಲೆ, ಶಾಸಕರು ಪ್ರಸ್ತಾವನೆ ಮಾಡಿರುವುದು ನಿಜ. ಶೀಘ್ರದಲ್ಲೇ ಅನುದಾನವನ್ನು ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು.
 

Articles You Might Like

Share This Article