ಬೆಂಗಳೂರು,ಮಾ.14- ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಸುಮ್ಮನಿರಲ್ಲ. ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯಾವುದೇ ಕಾರಣಕ್ಕೂ ನಾನು ಬಿಜೆಪಿಯನ್ನು ತ್ಯಜಿಸಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನಸಾರ್ವತ್ರಿಕ ಚುನಾವಣೆಯಲ್ಲಿ ನನಗೆ ಟಿಕೆಟ್ ನೀಡಿದರೆ ಸ್ರ್ಪಧಿಸುತ್ತೇನೆ. ನೀಡದಿದ್ದರೆ ಪಕ್ಷದಲ್ಲೇ ದುಡಿಯುತ್ತೇನೆ ಎಂದು ಹೇಳುವ ಮೂಲಕ ಎಲ್ಲದ್ದಕ್ಕೂ ಈಗ ಇತಿಶ್ರೀ ಹಾಡಿದ್ದಾರೆ.
ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ. ನನ್ನ ಪುತ್ರ ಚುನಾವಣೆಯಲ್ಲಿ ಸ್ರ್ಪಧಿಸುವುದು ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು, ಸಚಿವನಾಗಿ ನಾನು ಯಾರಿಗೂ ಅಪಚಾರ ಮಾಡುವುದಿಲ್ಲ. ಬಿಜೆಪಿಯಲ್ಲಿ ನನಗೆ ಗೌರವ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಒಳ್ಳೆಯ ನಾಯಕರಾಗಿದ್ದಾರೆ. ಅಮಿತ್ ಶಾ, ಜೆ.ಪಿ.ನಡ್ಡಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದರು.
ಒಕ್ಕಲಿಗ ಸಮುದಾಯಕ್ಕೆ ಶಾಶ್ವತ ಕಪ್ಪುಚುಕ್ಕೆ ಮೆತ್ತುವ ಷಡ್ಯಂತ್ರ : ಹೆಚ್‌ಡಿಕೆ
ಅರುಣ್ ಸೋಮಣ್ಣ ಅವರು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಬಗ್ಗೆ ಕಿಡಿಕಾರಿದ್ದರಲ್ಲಾ ಎಂಬ ಪ್ರಶ್ನೆಗೆ ನಾಜೂಕಾಗಿಯೇ ಉತ್ತರಿಸಿದ ಸೋಮಣ್ಣ, ನನ್ನ ಮಗ ವೈದ್ಯ, ಅವನಿಗೀಗ 47 ವರ್ಷ. ಸಣ್ಣ ಮಗುವಲ್ಲ.
ರಾಜಕೀಯದಲ್ಲಿ ಯಾರು ಯಾರಿಗೂ ಶತ್ರುವಲ್ಲ. ಯಾರು ಈ ರೀತಿ ಮಾತನಾಡಬಾರದು ಎಂದು ತಿಳಿಸಿದರು.
ಅರುಣ್‍ಗೆ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ನೀಡಿಲ್ಲ. ನನ್ನ ಮಗ ತಪ್ಪು ಮಾಡಿದ್ದರೆ ಕ್ರಮ ಕೈಗೊಳ್ಳಲಿ. ನನ್ನಿಂದ ಪಕ್ಷಕ್ಕೆ ಯಾವುದೇ ಮುಜುಗರವಾಗಬಾರದು ಎಂದು ಹೇಳಿದರು.
ನಾನು ಎಲ್ಲಿಗೂ ಹೋಗಲ್ಲ. ಈ ಹಿಂದೆ ನಮಗೆ 104 ಸ್ಥಾನ ಬಂದಾಗ ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದವರಲ್ಲಿ ನಾನು ಮೊದಲಿಗ. ಚುನಾವಣಾ ಪೂರ್ವದಲ್ಲೂ ಏನೇನು ಆಯಿತು ಎಂಬುದು ಎಲ್ಲಾ ಗೊತ್ತಿದೆ. ಜೆಡಿಎಸ್‍ನ ವರಿಷ್ಠರಾದ ಎಚ್.ಡಿ.ದೇವೇಗೌಡರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದರು.
ಸಂಸತ್‍ನಲ್ಲಿ ಇಂದೂ ಪ್ರತಿಧ್ವನಿಸಿದ ರಾಹುಲ್ ವಿವಾದಿತ ಹೇಳಿಕೆ
ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವರು ಆರೋಗ್ಯವಾಗಿ ಇರಲಿ. ಹಾಗೆಯೇ ಬಿ.ಎಲ್.ಸಂತೋಷ್ , ಪ್ರಹ್ಲಾದ್ ಜೋಶಿ ನಮ್ಮ ನಾಯಕರು. ನಾನು ಬಿಜೆಪಿಗೆ ಬರಲು ಅನಂತ್ ಕುಮಾರ್ ಅವರು ಕಾರಣ. ಕೆಲವರು ನನ್ನನ್ನು ಏಕವಚನದಲ್ಲಿ ಮಾತನಾಡಿ ನೋಯಿಸಿದ್ದಾರೆ. ಇನ್ನು ಮುಂದಾದರೂ ತೇಜೋವದೆ ಮಾಡಬೇಡಿ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ಚೆನ್ನಾಗಿರಲಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Minister, Somanna, BJP, leave,