Thursday, November 21, 2024
Homeರಾಜ್ಯಮುಸ್ಲಿಂ ಖಾದರ್‌ಗೆ ಬಿಜೆಪಿಯ ದೊಡ್ಡ ನಾಯಕರು ನಮಸ್ಕರಿಸುತ್ತಾರೆ : ಸಚಿವ ಜಮೀರ್

ಮುಸ್ಲಿಂ ಖಾದರ್‌ಗೆ ಬಿಜೆಪಿಯ ದೊಡ್ಡ ನಾಯಕರು ನಮಸ್ಕರಿಸುತ್ತಾರೆ : ಸಚಿವ ಜಮೀರ್

ಬೆಂಗಳೂರು,ನ.17-ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ಸಚಿವ ಜಮೀರ್ ಅಹಮದ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಮುಸ್ಲಿಂ ಸ್ಪೀಕರ್ ಯು.ಟಿ.ಖಾದರ್‌ಗೆ ಈಗ ಬಿಜೆಪಿಯವರೂ ನಮಸ್ಕರಿಸುತ್ತಾರೆ ಎನ್ನುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, ಹೈದರಾಬಾದ್‍ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್‍ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಹೇಳಿದ್ದಾರೆ.

ರಾಜಕೀಯ ಇತಿಹಾಸದಲ್ಲಿ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿರಲಿಲ್ಲ. ಈಗ ಮೊದಲ ಬಾರಿಗೆ ಮುಸ್ಲಿಂ ವ್ಯಕ್ತಿಯನ್ನು ಸ್ಪೀಕರ್ ಮಾಡಿದ್ದು ಕಾಂಗ್ರೆಸ್ ಪಕ್ಷ. ಈಗ ದೊಡ್ಡ ದೊಡ್ಡ ಬಿಜೆಪಿ ನಾಯಕರು ಕೂಡಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ನಮಸ್ಕಾರ ಎನ್ನುತ್ತಾರೆ. ಇದನ್ನು ಮಾಡಿದ್ದು ಯಾರು? ಕಾಂಗ್ರೆಸ್ ಪಕ್ಷ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಸಂಪುಟದಿಂದ ಸಚಿವ ಜಮೀರ್ ಅಹಮ್ಮದ್ ವಜಾಕ್ಕೆ ರೇಣುಕಾಚಾರ್ಯ ಒತ್ತಾಯ

ಕಳೆದ ಕೆಲ ದಿನಗಳ ಹಿಂದಷ್ಟೇ ಜಮೀರ್ ರಾಜಸ್ಥಾನದಲ್ಲಿ ಮಾತನಾಡುತ್ತಾ ಕರ್ನಾಟಕದಲ್ಲಿ ಕಾಂಗ್ರೆಸ್ ಮುಸ್ಲಿಂ ಮತಗಳಿಂದಲೇ ಅಧಿಕಾರಕ್ಕೆ ಬಂದಿದೆ ಎಂದಿದ್ದರು. ಈ ಮೂಲಕ ವಿವಾದವನ್ನು ಹುಟ್ಟುಹಾಕಿದ್ದರು. ಕರ್ನಾಟಕದ ಮಸೀದಿಗಳಲ್ಲಿ ನಾವು ಸಭೆ ಮಾಡಿ ಒಗ್ಗಟ್ಟು ಪ್ರದರ್ಶನಕ್ಕೆ ಮನವಿ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ರಾಜಸ್ಥಾನದಲ್ಲೂ ಇದೇ ಸೂತ್ರ ಅನುಸರಿಸಿ ಎಂದು ಕರೆ ನೀಡಿದ್ದರು.

ಕಣಿವೆಯಲ್ಲಿ ಮುಂದುವರೆದ ಉಗ್ರ ಬೇಟೆ

ಮುಸ್ಲಿಮರಲ್ಲಿ 17 ಮಂದಿಗೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 7 ಮಂದಿ ಶಾಸಕರಾಗಿ ಆಯ್ಕೆಯಾಗಿದ್ದೇವೆ. ಅದರಲ್ಲಿ 5 ಜನರಿಗೆ ಕಾಂಗ್ರೆಸ್ ಅಧಿಕಾರ ನೀಡಿದೆ. ನನಗೆ 3 ಖಾತೆ ನೀಡಿ ಮಂತ್ರಿ ಮಾಡಿದೆ. ರಹೀಂ ಖಾನ್ ಮಂತ್ರಿಯಾಗಿದ್ದಾರೆ. ಸಲೀಂ ಅಹ್ಮದ್ ವಿಪ್ ಆಗಿದ್ದಾರೆ. ನಸೀರ್ ಅಹ್ಮದ್ ಸಿಎಂ ಅವರ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ ಎಂದು ಹೇಳಿದರು.

RELATED ARTICLES

Latest News