ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಚಿವಾಲಯ ನೌಕರರ ಮೌನ ಪ್ರತಿಭಟನೆ

Social Share

ಬೆಂಗಳೂರು, ಫೆ.24- ಸಚಿವಾಲಯದಲ್ಲಿ ಹೊರಗುತ್ತಿಗೆ ರದ್ದುಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರರು ವಿಧಾನಸೌಧ ಮತ್ತು ವಿಕಾಸಸೌಧದ ಮಧ್ಯೆ ಇರುವ ಮಹಾತ್ಮ ಗಾಂೀಧಿಜಿ ಪ್ರತಿಮೆ ಮುಂಭಾಗ ಕಪ್ಪು ಮಾಸ್ಕï ಧರಿಸಿ ಮೌನ ಪ್ರತಿಭಟನೆ ನಡಿಸಿದರು.
ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಚಿವಾಲಯದ ಶಾಖಾಕಾರಿಗಳಿಗೆ ತಹಶೀಲ್ದಾರ್ ಹುದ್ದೆಗೆ ನಿಯೋಜನೆ ಮೇರೆಗೆ ಹೋಗಲು ಅವಕಾಶ ನೀಡಬೇಕು. ಹೊರಗುತ್ತಿಗೆ ಸೇವೆಯನ್ನು ರದ್ದುಪಡಿಸಿ, ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ ಮಾಡಬೇಕು
ನಿವೃತ್ತಿ ಅಧಿಕಾರಿ, ನೌಕರರನ್ನು ಪುರ್ನ ನೇಮಕ ಮಾಡಬಾರದು. ಅವಧಿ ಮೀರಿರುವ ನಿಯೋಜನೆಯಲ್ಲಿರುವ ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲಾಯಿತು.

Articles You Might Like

Share This Article