Tuesday, July 23, 2024
Homeರಾಷ್ಟ್ರೀಯಬಂದೂಕು ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಬಂದೂಕು ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಜೈಪುರ, ಡಿ 26 (ಪಿಟಿಐ) ರಾಜಸ್ಥಾನದ ಅಲ್ವಾರ್ ಜಿಲ್ಲೇಯ ಹೋಟೆಲ್‍ವೊಂದರಲ್ಲಿ ಮೂವರು ಪುರುಷರು 17 ವರ್ಷದ ಬಾಲಕಿಯನ್ನು ಬಂದೂಕಿನಿಂದ ಬೆದರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಕೆಲವು ಔಷಧಿಗಳನ್ನು ಖರೀದಿಸಲು ಹೊರಗೆ ಹೋಗಿದ್ದಾಗ ಆರೋಪಿಗಳು ಅವಳನ್ನು ಕಾರಿನಲ್ಲಿ ಅಪಹರಿಸಿ ಬಲವಂತವಾಗಿ ಮದ್ಯ ಕುಡಿಸಿದ್ದರು. ಆಕೆಯನ್ನು ಹೋಟೆಲ್‍ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರದ ಎರಡು ಕಡೆ ಭೂಕಂಪ

ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಪ್ರಾಪ್ತಿಯನ್ನು ಡಿ.23 ರ ರಾತ್ರಿ ಅಪಹರಿಸಲಾಗಿದೆ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಗಳು ಬಂದೂಕು ತೋರಿಸಿ ಕಾರಿನಲ್ಲಿ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಖೇರ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಮಹಾವೀರ ಪ್ರಸಾದ್ ಹೇಳಿದ್ದಾರೆ.

ಮನೋಜ್ ಸೈನಿ, ಕೇದಾರ್ ಸೈನಿ ಮತ್ತು ನರೇಂದ್ರ ಅವರನ್ನು ಎಫ್‍ಐಆರ್‍ನಲ್ಲಿ ಆರೋಪಿಗಳೆಂದು ಹೆಸರಿಸಲಾಗಿದೆ ಎಂದು ಪ್ರಸಾದ್ ಹೇಳಿದ್ದಾರೆ.ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯನ್ನು ಡಿಎಸ್ಪಿ ಕಾತುಮಾರ್ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News