Sunday, January 19, 2025
Homeರಾಷ್ಟ್ರೀಯ | Nationalರಾಮಮಂದಿರ ಸ್ಫೋಟಿಸುವ ಬೆದರಿಕೆ ಹಾಕಿದ್ದ ಬಾಲಕ ಹಾಗೂ ಅಜ್ಜಿ ಪೊಲೀಸರು ವಶಕ್ಕೆ

ರಾಮಮಂದಿರ ಸ್ಫೋಟಿಸುವ ಬೆದರಿಕೆ ಹಾಕಿದ್ದ ಬಾಲಕ ಹಾಗೂ ಅಜ್ಜಿ ಪೊಲೀಸರು ವಶಕ್ಕೆ

ಲಕ್ನೋ, ಮೇ 30- ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರಪ್ರದೇಶದ ಲುವಾ ಟಾಕಿಯಾ ಗ್ರಾಮದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಲಕ ರಾತ್ರಿ ಪೊಲೀಸ್‌‍ ಕಂಟೋಲ್‌ ರೂಮಿನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಸೈಬರ್‌ ಸೆಲ್‌ ಸಹಾಯದಿಂದ ಆರೋಪಿಗಳಿದ್ದ ಸ್ಥಳವನ್ನು ಪತ್ತೆಹಚ್ಚಿದ್ದಾರೆ.

ಇದೀಗ ಆರೋಪಿ ಬಾಲಕ ಹಾಗೂ ಆತನ ಅಜ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಕುಶಿನಗರ ಪೊಲೀಸ್‌‍ ವರಿಷ್ಠಾಧಿಕಾರಿ ಧವಲ್‌ ಜೈಸ್ವಾಲ್‌ ತಿಳಿಸಿದ್ದಾರೆ.

RELATED ARTICLES

Latest News