ಕೋಲ್ಕತ್ತಾ, ಜ.21- ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಸಂತಿ ಎಂಬಲ್ಲಿನ ಹೊಲವೊಂದರಲ್ಲಿ ಅತ್ಯಾಚಾರ ಮತ್ತು ಕೊಲೆಗೆ ಬಲಿಯಾಗಿರುವ ಅಪ್ರಾಪ್ತ ಬಾಲಕಿಯ ಮತದೇಹ ಪತ್ತೆಯಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಲಾಶ್ ಚಂದ್ರ ಧಾಲಿ ಅವರ ಪ್ರಕಾರ, ಎಂಟನೇ ತರಗತಿಯ ವಿದ್ಯಾರ್ಥಿನಿ ಅಪ್ರಾಪ್ತ ಬಾಲಕಿ ಜನವರಿ 9 ರಿಂದ ಕಾಣೆಯಾಗಿದ್ದಳು.ಸಂತ್ರಸ್ತೆಯ ಕುಟುಂಬ ಸದಸ್ಯರು ಮೂರು ದಿನಗಳ ನಂತರ ಜನವರಿ 12 ರಂದು ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ.
ಈಗ ಮತದೇಹ ಪತ್ತೆಯಾಗಿದ್ದು, ಸಂತ್ರಸ್ತೆಯ ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.
ಸಂತ್ರಸ್ತೆಯ ಪೋಷಕರು ನಾಪತ್ತೆಯಾದ ವರದಿಯನ್ನು ದಾಖಲಿಸಿದ್ದರಿಂದ, ಪೊಲೀಸರು ಅವಳನ್ನು ಹುಡುಕಲು ಪ್ರಾರಂಭಿಸಿದರು ಎಂದು ಮೂಲಗಳು ತಿಳಿಸಿವೆ. ಕೊನೆಗೆ, ನಿನ್ನೆ ಸಂಜೆ ಸಂತ್ರಸ್ತೆಯನ್ನು ತನ್ನ ನಿವಾಸದ ಸಮೀಪವಿರುವ ಹೊಲದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.ಹೊಲದ ಒಂದು ಭಾಗ ಆಕೆಯ ನಗ್ನ ದೇಹ ಪತ್ತೆಯಾಗಿದೆ ಎಂದು ಅವರು ಹೇಳಿದರು.
ಸ್ಥಳೀಯ ಯುವಕರು ಕರೆದ ನಂತರ ಜನವರಿ 9 ರಂದು ಮಧ್ಯಾಹ್ನ ಮಗಳು ಮನೆಯಿಂದ ಹೊರಗೆ ಹೋಗಿದ್ದಳು ಎಂದು ಸಂತ್ರಸ್ತೆಯ ಪೋಷಕರು ಹೇಳಿದ್ದಾರೆ.ಅಂದಿನಿಂದ ಆಕೆ ನಾಪತ್ತೆಯಾಗಿದ್ದಾಳೆ. ಮೊದಲು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಆಕೆಯ ಶವವನ್ನು ಹೂತು ಹಾಕಿರುವ ಶಂಕೆ ಇದೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಕುಟುಂಬದ ಸದಸ್ಯರೊಬ್ಬರು ತಿಳಿಸಿದ್ದಾರೆ. ಮತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಶವ ಪತ್ತೆಯಾದ ಬಳಿಕ ಸ್ಥಳೀಯರು ಪೊಲೀಸರ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದರು.