ಕೆಲಸ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ

Social Share

ಕೊಚ್ಚಿ,ನ.18- ಕೆಲಸ ಕೊಡಿಸುವ ನೆಪದಲ್ಲಿ ಮನೆಬಿಟ್ಟು ಓಡಿ ಬಂದ 17 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಮಾಡಿ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಬಂಧಿಸಲಾಗಿದೆ.

ಕೇರಳದ ತ್ರಿಶೂರ್ ಜಿಲ್ಲೆಗೆ ಸೇರಿದ ಬಾಲಕಿ ಕೆಲಸಹರಸಿ ಮನೆಬಿಟ್ಟು ಕೊಚ್ಚಿಗೆ ಬಂದಿದ್ದಳು. ಆರೋಪಿಗಳಲ್ಲಿ ಒಬ್ಬ ಯುವಕ ಈಕೆಯನ್ನು ಪುಸಲಾಯಿಸಿ ಸ್ನೇಹ ಬೆಳೆಸಿಕೊಂಡು ಕೆಲಸ ಕೊಡಿಸುವುದಾಗಿ ನಂಬಿಸಿದ್ದ.

ನಂತರ ಈಕೆಯನ್ನು ಕೆಲಸದ ನೆಪದಲ್ಲಿ ಲಾಡ್ಜ್‍ಗೆ ಕರೆದೊಯ್ದು ಕೂಲ್ ಡ್ರಿಂಕ್ಸ್‍ನಲ್ಲಿ ನಿದ್ದೆ ಮಾತ್ರೆ ಹಾಕಿ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆತನ ಸ್ನೇಹಿತರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ ದೇವೇಗೌಡರು-ಮಾಧುಸ್ವಾಮಿ ಭೇಟಿ

ಈಗ ತಿಂಗಳು ಗಟ್ಟಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲಾಡ್ಜ್ ಮಾಲೀಕ ಕೂಡ ಇದರಲ್ಲಿ ಭಾಗಿಯಾಗಿದ್ದಾರೆ. ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಬಳಿಕ ಈ ದುರಳರು ಆಕೆಯನ್ನು ಪಲ್ಲರಿ ವಟ್ಟಂನಲ್ಲಿ ಹೋಮ್ ಸ್ಟೇನಲ್ಲಿ ವೇಶವಾಟಿಕೆ ದಂಧೆ ನಡೆಸುವ ಮಹಿಳೆಗೆ ಮಾರಾಟ ಮಾಡಿದ್ದಾರೆ.

ಹಲವು ತಿಂಗಳ ಕಾಲ ನರಕಯಾತನೆ ಅನುಭವಿಸಿದ ಬಾಲಕಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಹಿಂದಿರುಗಿದಾಗ ಪ್ರಕರಣ ಬಯಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ..?

ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೇಶಾವಾಟಿಕೆ ನಡೆಸುತ್ತಿದ್ದ ಮಹಿಳೆ, ಲಾಡ್ಜ್‍ನ ಮಾಲೀಕ ಸೇರಿ 9 ಮಂದಿಯನ್ನು ಬಂಧಿಸಿದ್ದು, ಇನ್ನು 12 ಮಂದಿ ಆರೋಪಿಗಳ ಪತ್ತೆಗಾಗಿ ಬಲೆ ಬೀಧಿಸಿದ್ದಾರೆ.

Articles You Might Like

Share This Article