ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು.

Social Share

ಮೈಸೂರು, ಡಿ. 11- ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.

ತಿ.ನರಸೀಪುರ ತಾಲ್ಲೂಕಿನ ಜಗಜೀವನರಾಮ ಗ್ರಾಮದ ಮಹದೇವ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.
ಈತ ಕಳೆದ 2019 ಮೇ 11ರಂದು ತಮ್ಮ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದ 17 ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅಲ್ಲಿಯೇ ಉಳಿಸಿಕೊಂಡು ಅತ್ಯಾಚಾರ ವೆಸಗಿದ್ದ.

ಕಾಂಗ್ರೆಸ್‍ಗೆ ಕಂಟಕವಾದ AAP ಮತ್ತು AIMIM

ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶೈಮ್ ಖಟ್ರೋಜ್ ಅವರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪ ಸಾಬೀತಾದ ಕಾರಣ ಮಹದೇವ ಅಪರಾ ಎಂದು ಘೋಷಿಸಿ 10 ವರ್ಷ ಜೈಲು ಮತ್ತು 25 ಸಾವಿರ ರೂ. ದಂಡ ವಿಧಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.

minor rape, 10 years, imprisonment,

Articles You Might Like

Share This Article