ಶಿವಮೊಗ್ಗ, ಜೂ.29- ಮೇಯಲು ಹೋಗಿದ್ದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಹೊಸನಗರ ತಾಲೂಕಿನ ಬಿಜಾಪುರ ಗ್ರಾಮದಲ್ಲಿ ನಡೆದಿದೆ. ವಿಜಯಕುಮಾರ್ ಎಂಬ ರೈತನ ಹಸುವನ್ನು ಮೇಯಲು ಕಳುಹಿಸಿದ್ದಾಗ ದುಷ್ಕರ್ಮಿಗಳು ಈ ಹೇಯಕೃತ್ಯ ನಡೆಸಿದ್ದಾರೆ.
ರಕ್ತ ಸುರಿಸಿಕೊಂಡು ಮನೆಗೆ ಬಂದ ಹಸುವನ್ನು ನೋಡಿದ ಕುಟುಂಬಸ್ಥರು ಕೂಡಲೇ ಪಶು ವೈದ್ಯರನ್ನು ಕರೆದು ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಇಂತಹ ಕೃತ್ಯಗಳು ನಡೆಯುತ್ತಿದ್ದು, ರೈತರು ಆತಂಕಗೊಳ್ಳುತ್ತಿದ್ದಾರೆ.
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ
- ನಗರ್ತಪೇಟೆ ಅಗ್ನಿ ಅವಘಡ, ಇಬ್ಬರ ಬಂಧನ