ಬೆಂಗಳೂರು,ಜ.2- ಡೆತ್ನೋಟ್ ಬರೆದು ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತರ ಪತ್ನಿ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಲವರ ವಿರುದ್ದ ಎಫ್ಐಆರ್ ಹಾಕಿದ್ದಾರೆ. ಕಾನೂನು ಪ್ರಕಾರವೇ ತನಿಖೆ ನಡೆಯುವುದರಿಂದ ಸರ್ಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ದೇಶದ ಕಾನೂನು ಎಲ್ಲರಿಗೂ ಒಂದೇ. ನಿಷ್ಪಕ್ಷಪಾತದ ತನಿಖೆ ನಡೆಯಲಿದ್ದು, ಇದರಲ್ಲಿ ಯಾರೇ ಇದ್ದರೂ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದು ಹೇಳಿದರು.
ಕಳೆದ ವರ್ಷ ಜುಲೈನಲ್ಲೇ ರಾಜ್ಯದಲ್ಲಿ BF.7 ವೈರಸ್ ಪತ್ತೆಯಾಗಿತ್ತು..!
ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬೂತ್ ವಿಜಯ ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತ ಒಟ್ಟು 50 ಲಕ್ಷ ಪಕ್ಷದ ಬಾವುಟಗಳನ್ನು ಹಾರಿಸಲಿದ್ದೇವೆ. ಇದು ನಮ್ಮ ಸಂಘಟನೆಗೆ ದೊಡ್ಡ ಶಕ್ತಿ ತರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
MLA Arvind Limbavali, suicide case, CM Bommai,