Friday, November 22, 2024
Homeರಾಜ್ಯಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಸಿ.ಸಿ.ಪಾಟೀಲ್ ನೇಮಕ

ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷರಾಗಿ ಶಾಸಕ ಸಿ.ಸಿ.ಪಾಟೀಲ್ ನೇಮಕ

ಬೆಂಗಳೂರು. ಡಿ.12- ಪ್ರಸಕ್ತ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿ ಶಾಸಕ ಸಿ.ಸಿ.ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. 2023-24ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರಾಗಿದ್ದ ಶಾಸಕ ಆರ್.ಅಶೋಕ್ ಅವರು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವುದರಿಂದ ಅವರ ಬದಲಿಗೆ ಸಮಿತಿಯ ಸದಸ್ಯರಾದ ಸಿ.ಸಿ.ಪಾಟೀಲ್ ಅವರನ್ನು ವಿಧಾನಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ನಾಮ ನಿರ್ದೇಶನ ಮಾಡಿದ್ದಾರೆ.

ಕೆಂಪು ಸಮುದ್ರದಲ್ಲಿ ತೈಲ ಸಾಗಿಸುತ್ತಿದ್ದ ಹಡಗಿನ ಮೇಲೆ ದಾಳಿ

ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆ ನಿಯಮಾವಳಿಗಳ ನಿಯಮ 211(2)ರ ಮೇರೆಗೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಅಧ್ಯಕ್ಷರನ್ನಾಗಿ ಸಿ.ಸಿ.ಪಾಟೀಲ್ ಅವರನ್ನು ಸಭಾಧ್ಯಕ್ಷರು ನಾಮನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Latest News