ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್.ಬಾಲಕೃಷ್ಣ ಆಯ್ಕೆ

Social Share

ಬೆಂಗಳೂರು,ಜ.5-ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್.ಬಾಲಕೃಷ್ಣ , ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪ ರೆಡ್ಡಿ ಆಯ್ಕೆಯಾಗಿದ್ದಾರೆ. ಇಂದು ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಾಲಕೃಷ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಕೋನಪ್ಪ ರೆಡ್ಡಿ ಅವರಿಗೆ ತಲಾ 20 ಮತಗಳು ದೊರೆತು ಚುನಾಯಿತರಾಗಿದ್ದಾರೆ.
ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಫರ್ಧಿಸಿದ್ದ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪ ಗೌಡ 14 ಮತ ಪಡೆದು ಪರಾಜಿತಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಡಾ.ಕೆ.ವಿ.ರೇಣುಕಾಪ್ರಸಾದ್, ಹನುಮಂತಯ್ಯ, ಖಜಾಂಚಿಯಾಗಿ ಆರ್. ಪ್ರಕಾಶ್ ಮತ್ತು ಸಹಾಯಕ ಕಾರ್ಯದರ್ಶಿಯಾಗಿ ರಾಘವೇಂದ್ರ ಆಯ್ಕೆಯಾಗಿದ್ದಾರೆ‌.
ಸಂಘದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ನಿರ್ದೇಶಕರು ಹಾಗೂ ಅವರ ಬೆಂಬಲಿಗರು ಅಭಿನಂಧಿಸಿದರು‌. ಡಿಸೆಂಬರ್ 12ರಂದು ಚುನಾವಣೆಯಲ್ಲಿ ಆಯ್ಕೆಯಾಗಿದ್ದ 35 ಕಾರ್ಯಕಾರಿ ಸಮಿತಿ ಸದಸ್ಯರ ನಡುವೆ ಪದಾಧಿಕಾರಿಗಳ ಚುನಾವಣೆ ನಡೆದಿತ್ತು. ಪದಾಧಿಕಾರಿಗಳ ಚುನಾವಣೆಯಲ್ಲಿ ಆಯ್ಕೆಯಾಗಲು ಕನಿಷ್ಟ 18 ಕಾರ್ಯಕಾರಿ ಸದಸ್ಯರ ಮತ ಬೇಕಾಗಿತ್ತು.
ಬಾಲಕೃಷ್ಣ ಹಾಗೂ ಕೆಂಚಪ್ಪಗೌಡರ ತಂಡದ ನಿರ್ದೇಶಕರು ಪದಾಧಿಕಾರಿಗಳ ಚುನಾವಣೆಗೆ ಸ್ಪರ್ಧಿಸಿದ್ದರು. ಬಾಲಕೃಷ್ಣ ಅವರ ತಂಡದವರು ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಒಕ್ಕಲಿಗರ ಸಂಘಕ್ಕೆ ಮೂರು ವರ್ಷಕ್ಕೂ ಹೆಚ್ಚು ಕಾಲದಿಂದ ಇದ್ದ ಆಡಳಿತಾಧಿಕಾರಿಗಳ ಅಧಿಕಾರಾವಧಿ ಕೊನೆಗೊಂಡಂತಾಗಿದೆ.

Articles You Might Like

Share This Article