ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು,ಅ.15– ಮಹಿಳೆ ಮೇಲೆ ಅತ್ಯಾಚಾರ ವೆಸಗಿದ ಆರೋಪದ ಮೇಲೆ ಜೈಲು ಪಾಲಾಗಿದ್ದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡುಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಂಗಳವಾರ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ್ದು, ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಮುನಿರತ್ನಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಪೊಲೀಸರ ತನಿಖೆಗೆ ಸಹಕಾರ ನೀಡುವುದು, ಸಾಕ್ಷಿಗಳನ್ನು ನಾಶಪಡಿಸದಿರುವುದು, ಸಾಕ್ಷ್ಯಾಧಾರರ ಮೇಲೆ ಪ್ರಭಾವ ಬೀರದಿರುವುದು, ಇಬ್ಬರ ಶ್ಯೂರಿಟಿ ಮೇಲೆ ಜಾಮೀನನ್ನು ಮಂಜೂರು … Continue reading ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು