Thursday, September 19, 2024
Homeಇದೀಗ ಬಂದ ಸುದ್ದಿಶಾಸಕ ನರೇಂದ್ರಸ್ವಾಮಿ ಅವರಿಗೆ ಪಿತೃವಿಯೋಗ

ಶಾಸಕ ನರೇಂದ್ರಸ್ವಾಮಿ ಅವರಿಗೆ ಪಿತೃವಿಯೋಗ

ಮಳವಳ್ಳಿ, ಆ.6- ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ತಂದೆ ಪಿ.ಎಲ್‌.ಮಲ್ಲಯ್ಯ (93 ವರ್ಷ) ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ಮಧ್ಯರಾತ್ರಿ ನಿಧನರಾದರು.

ಅವರು ತಾಲ್ಲೂಕು ಬೋರ್ಡ್‌ ಸದಸ್ಯರಾಗಿ, ಪೂರಿಗಾಲಿ ಗ್ರಾಮ ಪಂಚಾಯತಿ, ಹಾಲು ಉತ್ಪಾದಕರ ಸಹಕಾರ ಸಂಘ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತ ಪಿ.ಎಲ್‌.ಮಲ್ಲಯ್ಯ ಅವರು ಪತ್ನಿ ಮಹದೇವಮ್ಮ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಅವರ ಅಂತ್ಯಸಂಸ್ಕಾರವು ಸ್ವಗ್ರಾಮವಾದ ಮಳವಳ್ಳಿಯ ಪೂರಿಗಾಲಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.

RELATED ARTICLES

Latest News