ಬೆಂಗಳೂರು,ಜೂ.23- ಬಿ.ಆರ್.ಪಾಟೀಲರ ಬಳಿಕ ಈಗ ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ರಾಜ್ಯಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, 2-3 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಭರಮಗೌಡ ಅಲಗೌಡ ಕಾಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು, ರಾಜ್ಯಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 2 ವರ್ಷಗಳ ಹಿಂದೆ ತಮ ಕ್ಷೇತ್ರಕ್ಕೆ ವಿಶೇಷ ಅನುದಾನದಡಿ 25 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು.
ಅದರಲ್ಲಿ 12 ಕೋಟಿ ರೂ.ಗಳನ್ನು ರಸ್ತೆಯ ಅಭಿವೃದ್ಧಿಗೆ ನಿಗದಿಯಾಗಿದ್ದರೆ ಉಳಿದ 13 ಕೋಟಿ ರೂ.ಗಳನ್ನು 72 ಸಮುದಾಯ ಭವನಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೂ ಕಾರ್ಯಾದೇಶ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.
ಯಾವ ಕಾರಣಕ್ಕೆ ಕಾರ್ಯಾದೇಶ ನೀಡಲಾಗಿಲ್ಲ ಎಂಬುದು ನನಗೆ ಗೊತ್ತಿಲ್ಲ. ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಕ್ಕಿಂತಲೂ ಭೀಕರ ಪರಿಸ್ಥಿತಿ ತಮ ಕ್ಷೇತ್ರದಲ್ಲಿದೆ. ಅಧಿಕಾರಿಗಳು 2 ವರ್ಷವಾದರೂ ಕಾರ್ಯಾದೇಶ ಕೊಡದೇ ಇರುವುದಕ್ಕೆ ಕಾರಣಗಳೇನು ಎಂದು ತಮಗೆ ಗೊತ್ತಿಲ್ಲ ಎಂದಿದ್ದಾರೆ.
ಬಿ.ಆರ್.ಪಾಟೀಲ್ ಹೇಳಿದ್ದಕ್ಕೆ ನನ್ನ ಸಹಮತ ಇದೆ. ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ರಾಜೀನಾಮೆ ನೀಡುವ ಮನಸ್ಥಿತಿಯಲ್ಲಿದ್ದೇನೆ. 2-3 ದಿನಗಳಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ. ಇದು ಕಾಂಗ್ರೆಸ್‌ನಲ್ಲೇ ಭಾರೀ ಸಂಚಲನ ಸೃಷ್ಟಿಸಿದೆ.ಆಡಳಿತ ಪಕ್ಷದಲ್ಲೇ ಒಬ್ಬರಾದ ಮೇಲೆ ಒಬ್ಬ ಶಾಸಕರು ತಿರುಗಿ ಬೀಳುತ್ತಿದ್ದು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡುತ್ತಿದೆ.
- ಬೆಂಗಳೂರಲ್ಲಿ ಇಂದು ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರ ಸಾವು
- ಶಾಲೆಗಳಿಗೆ ಬಾಂಬ್ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ : ಗೃಹಸಚಿವ ಪರಮೇಶ್ವರ
- ನೈರುತ್ಯ ಮುಂಗಾರು ಚೇತರಿಕೆ, ರಾಜ್ಯದ ಹಲವೆಡೆ ಮಳೆ
- 20 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಬೆಚ್ಚಿ ಬಿದ್ದ ದೆಹಲಿ
- ಟಿಆರ್ಎಫ್ನ್ನು ಜಾಗತಿಕ ಭಯೋತ್ಪಾದಕ ಸಂಘಟನೆಗೆ ಎಂದು ಘೋಷಿಸಿದ ಅಮೆರಿಕ ; ಭಾರತ ಸ್ವಾಗತ