ಬೆಂಗಳೂರು, ಮಾ.3 – ಚಲನಚಿತ್ರಗಳಿಗೆ ನೀಡುವ ಸಹಾಯಧನವನ್ನು ಪರಾಮರ್ಶೆ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಬಗ್ಗೆ ಕೆಲವರು ಧಿಮಾಕಿನ ಮಾತನಾಡಿದ್ದಾರೆ.
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂದರ್ಭದಲ್ಲಿ ಸಿಸಿಎಲ್ ನಿಲ್ಲಿಸಬೇಕಿತ್ತು. ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಹೇಳಿಬೇಕಿತ್ತಲ್ಲವೇ ಎಂದು ಪ್ರಶ್ನೆ ಮಾಡಿದರು.
ಚಲನಚಿತ್ರ ವಾಣಿಜ್ಯ ಮಂಡಳಿ (Kannada Film Industry ) ಅಧ್ಯಕ್ಷರು ಬಾಯಿ ಮುಚ್ಚಿಕೊಂಡಿರಬೇಕು. ಇಲ್ಲಿಗೆ ಬಂದು ಹಣ ಮಾಡಿ ನಮ್ಮ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಬಾರಿ ಚಲನಚಿತ್ರೋತ್ಸವಕ್ಕೆ ಕಿರಿಕ್ ಪಾರ್ಟಿ ರಶ್ಮಿಕ ಮಂದಣ್ಣ ಅವರನ್ನು ಖುದ್ದು ಮನೆಗೆ ಆಹ್ವಾನಿಸಿದ್ದರು. ಹೈದರಾಬಾದ್‌ನಲ್ಲಿ ಬರಲು ಆಗುವುದಿಲ್ಲ. ಎಂದು ಹೇಳಿದ್ದರು ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವುದನ್ನು ಯಾರೂ ತಡೆಯಲಾಗುವುದಿಲ್ಲ. ಎಂದು ಹೇಳಿರುವುದು ತಮ್ಮ ಗಮನಕ್ಕೆ ಬಂದಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.