ಚರ್ಚೆಗೆ ಗ್ರಾಸವಾಯ್ತು ಸಿಎಂ ಕುರಿತು ಶಾಸಕ ಶ್ರೀನಿವಾಸ್ ‘ರಾಜೀನಾಮೆ’ ಹೇಳಿಕೆ

ಬೆಂಗಳೂರು,ಮಾ.23- ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸದೇ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಎಸ್.ಆರ್.ಶ್ರೀನಿವಾಸ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಲೋಕಸಭಾ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇತ್ತೀಚೆಗೆ ಬೆಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದರು. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಜಂಟಿಯಾಗಿ ಚುನಾವಣಾ ಉಸ್ತುವಾರಿ ನಿಭಾಯಿಸುತ್ತಿದ್ದಾರೆ. ಅಭ್ಯರ್ಥಿಗಳ ಆಯ್ಕೆ, ಪ್ರಚಾರ ಸೇರಿದಂತೆ ಎಲ್ಲಾ ವಿಚಾರಗಳಲ್ಲೂ ಇಬ್ಬರ … Continue reading ಚರ್ಚೆಗೆ ಗ್ರಾಸವಾಯ್ತು ಸಿಎಂ ಕುರಿತು ಶಾಸಕ ಶ್ರೀನಿವಾಸ್ ‘ರಾಜೀನಾಮೆ’ ಹೇಳಿಕೆ