Friday, October 11, 2024
Homeರಾಜ್ಯಸತೀಶ್ ಜಾರಕಿಹೊಳಿ ಸಿಎಂ ಆಗುವುದು ಖಚಿತ..!

ಸತೀಶ್ ಜಾರಕಿಹೊಳಿ ಸಿಎಂ ಆಗುವುದು ಖಚಿತ..!

ಬೆಳಗಾವಿ,ನ.21- ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯಎಂದು ಶಾಸಕ ವಿಶ್ವಾಸ್ ವೈದ್ಯ ಹೊಸ ಬಾಂಬ್ ಸಿಡಿಸಿದ್ದು ,ಇದು ಹೊಸ ಸಂಚಲನ ಸೃಷ್ಠಿಸಿದೆ.

ಯರಗಟ್ಟಿಯಲ್ಲಿ ಮಾತನಾಡಿದ ಅವರು ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ ಮುಂದೆ ಸಿಎಂ ಆಗುತ್ತಾರೆ ಅವರನ್ನು ಆ ಸ್ಥಾನದಲ್ಲಿ ನೋಡಬೇಕಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ವಿಭಾಗ ಪೊಲೀಸರ ಕಾರ್ಯಾಚರಣೆ: 1.15 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ಜಪ್ತಿ

ಪೂರ್ವ ದಿಕ್ಕಿನಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ ಸತೀಶ್ ಜಾರಕಿಹೊಳಿ ಅಣ್ಣ ಸಿಎಂ ಆಗುವುದು ಕೂಡ ಅಷ್ಟೇ ಸತ್ಯಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಇದು ಈ ಭಾಗದಲ್ಲಿ ಭಾರಿ ಸದ್ದು ಮಾಡಿದೆ.

ಈ ಮೊದಲೇ ಸತೀಶ್ ಜಾರಕಿಹೊಳಿ ತಮ್ಮ ಅಸಮಾಧಾನಗೊಂಡು ತಮ್ಮ ರಾಜಕೀಯ ದಾಳ ಉರುಳಿಸಿದ್ದರು.
ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು ಆದರೆ ಈಗ ಬೆಂಬಲಿಗ ಶಾಸಕರು ನೀಡುತ್ತಿರುವ ಹೇಳಿಕೆ ಹೊಸ ಗೊಂದಲ ಸೃಷ್ಠಿಸುತ್ತಿದೆ.

RELATED ARTICLES

Latest News