Friday, November 22, 2024
Homeರಾಜ್ಯಮೌಲ್ವಿಗೆ ಉಗ್ರರ ನಂಟು, ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

ಮೌಲ್ವಿಗೆ ಉಗ್ರರ ನಂಟು, ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

ಬೆಳಗಾವಿ,ಡಿ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐಸಿಸ್ ಉಗ್ರರ ಸಂಪರ್ಕ ಹೊಂದಿರುವ ಮೌಲ್ವಿ ಜೊತೆಗೆ ವೇದಿಕೆ ಹಂಚಿಕೊಂಡಿದ್ದರು ಎಂದು ಆರೋಪಿಸಿದ್ದ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರೀಯ ತನಿಖಾ ದಳ ( ಎನ್‍ಐಎ) ದಿಂದ ಈ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿದ್ದಾರೆ.

ಸಿದ್ದರಾಮಯ್ಯನವರು ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡಿದ್ದಕ್ಕೆ ಸಂಬಂಧಿಸಿದ ಕೆಲವು ಫೋಟೋ ಟ್ವೀಟ್ ಮಾಡಿದ್ದರು. ಮೌಲ್ವಿ ಕೂಡ ಉಗ್ರರ ಸಂಪರ್ಕ ಇರುವುದನ್ನು ಸಾಬೀತುಪಡಿಸುವಂತೆ ಸವಾಲು ಹಾಕಿದ್ದಾರೆ. ಇದೀಗ ನೇರವಾಗಿ ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ ಬರೆದಿದ್ದಾರೆ. ಮೌಲ್ವಿ ಉಗ್ರರ ಸಂಪಕ ಹೊಂದಿರುವ ಆರೋಪದ ಬಗ್ಗೆ ಎನ್‍ಐಎ ತನಿಖೆ ನಡೆಸುವಂತೆ ಮನವಿ ಮಾಡಿ ಪತ್ರವನ್ನು ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು ಈ ಬಗ್ಗೆ ಟ್ವೀಟ್ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವೀರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ ಎಂದು ಒಂದು ಟ್ವೀಟ್ ಪೋಸ್ಟ್‍ನಲ್ಲಿ ಬರೆದುಕೊಂಡಿದ್ದರು.

ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳನ್ನು ವಜಾ ಮಾಡಿದ ಯೋಗಿ

ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದರು. ಕೆಲವೇ ದಿನಗಳಲ್ಲಿ ತನ್ವೀರ್ ಪೀರಾ ಎಂಬುವವರ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೋಟಕ ಆರೋಪ ಮಾಡಿದ್ದರು.

ರಜಪೂತ ಕರ್ಣಿ ಸೇನೆ ಅಧ್ಯಕ್ಷರ ಹತ್ಯೆ : ಇಬ್ಬರು ಪೊಲೀಸರ ಅಮಾನತು

ಹಾಗೆಯೇ ಮತ್ತೊಂದು ಟ್ವೀಟ್‍ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ ಕುರಿತು ಆರೋಪ ಮಾಡುತ್ತಾ, ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದಿದ್ದರು. ಇದೀಗ ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದರು.

RELATED ARTICLES

Latest News