Friday, July 18, 2025
Homeರಾಜಕೀಯ | Politicsದ್ವೇಷ ರಾಜಕಾರಣಕ್ಕಾಗಿ ವಿಪಕ್ಷ ಶಾಸಕರನ್ನು ಟಾರ್ಗೆಟ್‌ ಮಾಡಿದರೆ ಉಗ್ರ ಹೋರಾಟ : ಅಶೋಕ್‌ ಎಚ್ಚರಿಕೆ

ದ್ವೇಷ ರಾಜಕಾರಣಕ್ಕಾಗಿ ವಿಪಕ್ಷ ಶಾಸಕರನ್ನು ಟಾರ್ಗೆಟ್‌ ಮಾಡಿದರೆ ಉಗ್ರ ಹೋರಾಟ : ಅಶೋಕ್‌ ಎಚ್ಚರಿಕೆ

MLAs are targeted for hate politics: Ashok

ಬೆಂಗಳೂರು,ಜು.18- ದ್ವೇಷ ರಾಜಕಾರಣ ಮಾಡಿ ವಿಪಕ್ಷ ಶಾಸಕರನ್ನು ಟಾರ್ಗೆಟ್‌ ಮಾಡಿದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ರಾಜ್ಯ ಸರ್ಕಾರಕ್ಕೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಸುಳ್ಳು ಕೇಸುಗಳನ್ನು ಹಾಕುವ ಮೂಲಕ ಬಿಜೆಪಿ ಶಾಸಕರಿಗೆ ಬೆದರಿಕೆ ಹಾಕಬಹುದು ಎಂಬ ಭ್ರಮೆಯಿಂದ ಕಾಂಗ್ರೆಸ್‌‍ ಸರ್ಕಾರ ಹೊರಬರಬೇಕು. ಬಿಜೆಪಿ ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ. ಆರೋಪ ಇದ್ದರೆ ಕಾನೂನಿನ ಪ್ರಕಾರ ತನಿಖೆ ಮಾಡಲಿ. ನ್ಯಾಯಾಲಯದಲ್ಲಿ ಸಾಬೀತು ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್‌‍ ಸರ್ಕಾರದಿಂದ ವಿಪಕ್ಷ ಶಾಸಕರನ್ನು ಹತ್ತಿಕ್ಕುವ ಪ್ರಯತ್ನ! ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ರೌಡಿ ಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಅವನ ತಾಯಿ ವಿಜಯಲಕ್ಷೀ ಅವರು ನಾನು ಬೈರತಿ ಬಸವರಾಜ್‌ ವಿರುದ್ಧ ದೂರು ಕೊಟ್ಟಿಲ್ಲ, ಪೊಲೀಸರೇ ಹೆಸರು ಹಾಕಿಕೊಂಡಿದ್ದಾರೆ ಎಂದು ಹೇಳಿರುವುದು ಕಾಂಗ್ರೆಸ್‌‍ ಸರ್ಕಾರ ಈ ಪ್ರಕರಣದಲ್ಲಿ ಯಾವ ಕೀಳು ಮಟ್ಟಕ್ಕೆ ಇಳಿದು ರಾಜಕೀಯ ದ್ವೇಷ ಸಾಧಿಸುತ್ತಿದೆ ಎನ್ನುವುದನ್ನ ಸಾಬೀತು ಪಡಿಸಿದೆ ಎಂದು ಆರೋಪಿಸಿದ್ದಾರೆ.

ಮಾತೆತ್ತಿದರೆ ಸಿಬಿಐ, ಐಟಿ, ಇಡಿ ಮೂಲಕ ಕೇಂದ್ರ ಸರ್ಕಾರ ವಿಪಕ್ಷಗಳನ್ನು ಟಾರ್ಗೆಟ್‌ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವ ಕಾಂಗ್ರೆಸ್‌‍ ನಾಯಕರು, ದೂರಿನಲ್ಲಿ ಶಾಸಕರ ಹೆಸರೇ ಇಲ್ಲದಿದ್ದರೂ ಅವರ ಮೇಲೆ ದುರುದ್ದೇಶದಿಂದ ಎಫ್‌ಐಆರ್‌ ಹಾಕಿರುವುದು ಯಾವ ಸೀಮೆ ನ್ಯಾಯನ ಎಂದು ಆಶೋಕ್‌ ಪ್ರಶ್ನೆ ಮಾಡಿದ್ದಾರೆ.

RELATED ARTICLES

Latest News