Monday, June 24, 2024
Homeಇದೀಗ ಬಂದ ಸುದ್ದಿಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಮೂವರು ಶಾಸಕರ ರಾಜೀನಾಮೆ ಅಂಗೀಕರಿಸಿದ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌

ಬೆಂಗಳೂರು, ಜೂ.16-ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಚುನಾಯಿತರಾಗಿ ಸಂಸತ್‌ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್‌.ಡಿ.ಕುಮಾರಸ್ವಾಮಿ, ಬಸವರಾಜ ಬೊಮಾಯಿ ಹಾಗೂ ಇ. ತುಕಾರಾಂ ಅವರು ಶಾಸಕ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅಂಗೀಕರಿಸಿದ್ದಾರೆ.

ಶಾಸಕ ಸ್ಥಾನದ ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ ಮೂರು ವಿಧಾನಸಭಾ ಕ್ಷೇತ್ರಗಳ ಸದಸ್ಯತ್ವ ತೆರವಾಗಿರುವ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ , ಬಸವರಾಜ ಬೊಮಾಯಿ ಅವರು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ನಿನ್ನೆ ಹಾಗೂ ಇ ತುಕಾರಾಂ ಅವರು ಸಂಡೂರು ವಿಧಾನಸಭಾ ಕ್ಷೇತ್ರದ ಸದಸ್ಯ ಸ್ಥಾನಕ್ಕೆ ಜೂ.14ರಂದು ರಾಜೀನಾಮೆ ನೀಡಿದ್ದರು. ಸಭಾಧ್ಯಕ್ಷರು ಈ ಮೂರು ರಾಜೀನಾಮೆಗಳನ್ನು ನಿನ್ನೆ ಅಂಗೀಕರಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

RELATED ARTICLES

Latest News