ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಸಿದ್ಧತೆ

Social Share

ಬೆಂಗಳೂರು,ನ.26- ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಮೊಬೈಲ್ ಮುಕ್ತ ದಿನ ನಿಯಮ ಜಾರಿಗೆ ತರಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದೆ.

ಬ್ಯಾಗ್ ಲೆಸ್ ಡೇ ಬಳಿಕ ಮೊಬೈಲ್ ಲೆಸ್ ಡೇ ಪ್ರಯತ್ನಕ್ಕೆ ಮುಂದಾಗಿದ್ದು, ಪೋಷಕರ ಅಭಿಪ್ರಾಯದ ಮೇರೆಗೆ ಸರ್ಕಾರ ಈ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೊರೊನಾ ಹಿನ್ನೆಲೆ ಶಾಲೆಗಳಲ್ಲಿ ಆನ್‍ಲೈನ್ ಕ್ಲಾಸ್ ನಡೆಸಲಾಗಿತ್ತು, ಇದಕ್ಕಾಗಿ ಮಕ್ಕಳು ವಿಪರೀತವಾಗಿ ಮೊಬೈಲ್ ಬಳಕೆ ಮಾಡಿದ್ದರು. ಆದರೆ ಬರು ಬರುತ್ತಾ ಮಕ್ಕಳಲ್ಲಿ ಮೊಬೈಲ್ ಗೀಳು ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

6.20 ಲಕ್ಷ ಮೌಲ್ಯದ ಆಭರಣ ವಶ

ಮಗುವಿನ ಭಾವನಾತ್ಮಕ ನಡವಳಿಕೆಯು ಅನೇಕ ವಿಧಗಳಲ್ಲಿ ಪರಿಣಾಮ ಬೀರುತ್ತಿದ್ದು, ಡಿಜಿಟಲ್ ಮಾಧ್ಯಮವು ಮಗುವಿನ ಕಲ್ಪನೆ ಮತ್ತು ಪ್ರೇರಣೆ ಮಟ್ಟದ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿದ್ದು, ಮಕ್ಕಳಲ್ಲಿ ಕಿರಿಕಿರಿ , ಹತಾಶೆ, ಆತಂಕ ಮತ್ತು ಹಠಾತ್ ಅಸ್ವಸ್ಥತೆಗಳು ಕಾಣಿಸಿಕೊಳ್ಳುತ್ತವೆ ಎಂದು ಇಲಾಖೆ ತಿಳಿಸಿದೆ.

ಬ್ಯಾಗ್ ಲೆಸ್ ಡೇ ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ ಸರ್ಕಾರ ಶನಿವಾರ ಬ್ಯಾಗ್ ಹೊರೆಯಿಂದ ಮುಕ್ತಿ ನೀಡುವ ಚಿಂತನೆ ನಡೆಸಿದೆ.

ನಾಲ್ವರ ಬಂಧನ : 15.53ಲಕ್ಷ ಮೌಲ್ಯದ ಚಿನ್ನಾಭರಣ, ವಾಹನಗಳ ವಶ

ಹೌದು ಪ್ರತಿನಿತ್ಯ ಪುಸ್ತಕದ ಭಾರ ಹೊತ್ತು ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ನು ಮುಂದೆ ಶನಿವಾರ ಬ್ಯಾಗ್ ಬೆನ್ನಿಗೇರಿಸಿ ಮಕ್ಕಳು ಶಾಲೆಗೆ ಹೋಗಬೇಕಾದ ಅಗತ್ಯ ಇಲ್ಲ . ರಾಜ್ಯದಲ್ಲಿ ಶನಿವಾರ ಬ್ಯಾಗ್ ಲೆಸ್ ಡೇ ಆಚರಿಸಲು ಸರ್ಕಾರ ಚಿಂತನೆ ನಡೆದಿದೆ.

ಶನಿವಾರ ಪಾಠದ ಬದಲಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಶಿಕ್ಷಣ ಸಚಿವ ನಾಗೇಶ್ ಅವರು ಈ ಯೋಜನೆ ಜಾರಿಗೆ ತರಲು ಚಿಂತನೆ ನಡೆಸಿದ್ದು, ಶೀಘ್ರದಲ್ಲೇಯೇ ಈ ಸಂಬಂಧ ಅಂತಿಮ ಆದೇಶ ಹೊರ ಬೀಳುವ ನಿರೀಕ್ಷೆಯಿದೆ.

ಗುಂಡಿಮಯವಾದ ಮೆಜೆಸ್ಟಿಕ್ : ಚಾಲಕರು, ಪ್ರಯಾಣಿಕರ ಪರದಾಟ

mobile, phones, schools, government, ban,

Articles You Might Like

Share This Article