ಮೊಬೈಲ್ ದರೋಡೆ ಮಾಡುತ್ತಿದ್ದ ಆರೋಪಿ ಅರೆಸ್ಟ್ : 7 ಮೊಬೈಲ್ ವಶ

Social Share

ಬೆಂಗಳೂರು, ಮಾ.5- ಮೊಬೈಲ್‍ಗಳನ್ನು ದರೋಡೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿ ವಿವಿಧ ಕಂಪೆನಿಗಳ ಏಳು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕೆಟಿಎಂ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಚಾಮರಾಜಪೇಟೆಯ ಟಿಪ್ಪು ನಗರದ 1ನೆ ಮುಖ್ಯರಸ್ತೆ ನಿವಾಸಿ ರಫೀಕ್ ಅಹಮ್ಮದ್ (24) ಬಂಧಿತ ಆರೋಪಿ.
ಸಿದ್ದಯ್ಯರಸ್ತೆ, ದರ್ಗಾ ಹತ್ತಿರ ತೌಸಿಫ್ ಎಂಬುವವರು ದ್ವಿಚಕ್ರ ವಾಹನ ನಿಲ್ಲಿಸಿಕೊಂಡು ಸ್ಯಾಮ್‍ಸಂಗ್ ಗೆಲಾಕ್ಸಿ ಮೊಬೈಲ್ ನೋಡುತ್ತಿದ್ದಾಗ ದರೋಡೆಕೋರ ಇವರ ಕೈಯಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದನು.
ಈ ಬಗ್ಗೆ ಕಲಾಸಿಪಾಳ್ಯ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ದರೋಡೆಕೋರನ ಬಗ್ಗೆ ಮಾಹಿತಿ ಕಲೆ ಹಾಕಿ ಆತನನ್ನು ಪತ್ತೆಹಚ್ಚಿ ಬಂಧಿಸಿ 2.75 ಲಕ್ಷ ಮೌಲ್ಯದ ಏಳು ಮೊಬೈಲ್‍ಗಳು, ಕೃತ್ಯಕ್ಕೆ ಬಳಸಿದ್ದ ಕೆಟಿಎಂ ಬೈಕ್ ವಶಪಡಿಸಿಕೊಂಡಿದ್ದಾರೆ.
ಡಿಸಿಪಿ ಸಂಜೀವ್ ಎಂ.ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಚಿಕ್ಕಪೇಟೆ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರವಿ ಅವರ ನೇತೃತ್ವದಲ್ಲಿ ಕಲಾಸಿಪಾಳ್ಯ ಠಾಣೆ ಇನ್ಸ್‍ಪೆಕ್ಟರ್ ಚೇತನ್‍ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಸುವಲ್ಲಿ ಯಶಸ್ವಿಯಾಗಿದ್ದಾರೆ.

Articles You Might Like

Share This Article