Friday, November 22, 2024
Homeರಾಜ್ಯಗಮನ ಬೇರೆಡೆ ಸೆಳೆದು ಮೊಬೈಲ್ ಕಳವು, ಇಬ್ಬರ ಬಂಧನ : 11ಲಕ್ಷ ಮೌಲ್ಯದ ಮಾಲು ಜಫ್ತಿ

ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು, ಇಬ್ಬರ ಬಂಧನ : 11ಲಕ್ಷ ಮೌಲ್ಯದ ಮಾಲು ಜಫ್ತಿ

ಬೆಂಗಳೂರು,ಫೆ.20- ಗ್ರಾಹಕರಂತೆ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ ಹಾಗೂ ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿ 11 ಲಕ್ಷ ರೂ. ಮೌಲ್ಯದ 5ದ್ವಿಚಕ್ರ ವಾಹನಗಳು ಹಾಗೂ 41 ಮೊಬೈಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

ಬೇಗೂರು ನಿವಾಸಿ ಶಿವರಾಜ್ ಮತ್ತು ಆದೂರು ನಿವಾಸಿ ನವೀನ ಬಂಧಿತ ಆರೋಪಿಗಳು. ಇವರಿಬ್ಬರು ಜೊತೆಯಾಗಿ ಬೈಕ್‍ನಲ್ಲಿ ಸುತ್ತಾಡುತ್ತಾ ಅಂಗಡಿಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿ ಅಲ್ಲಿಗೆ ಒಬ್ಬ ಅಂಗಡಿಯಲ್ಲಿದ್ದವರನ್ನು ಮಾತನಾಡಿಸುತ್ತಾ ಗಮನ ಸೆಳೆದರೆ ಮತ್ತೊಬ್ಬ ಟೇಬಲ್ ಮೇಲಿಟ್ಟಿದ್ದ ಮೊಬೈಲ್ ಹಾಗೂ ಹಣವನ್ನು ಎಗರಿಸಿ ಜಾಗ ಖಾಲಿ ಮಾಡುತ್ತಿದ್ದರು.

ಅದೇ ರೀತಿ ಪಾರ್ಕಿಂಗ್ ಸ್ಥಳಗಳಲ್ಲಿ ಹಾಗೂ ಮನೆ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಕಳೆದ ಡಿ.19ರಂದು ರಾತ್ರಿ 8 ಗಂಟೆ ಸುಮಾರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಬೆಳಗಾಗುವಷ್ಟರಲ್ಲಿ ಕಾಣೆಯಾಗಿತ್ತು. ಈ ಬಗ್ಗೆ ವಾಹನದ ಮಾಲೀಕರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಅಡ್ಜೆಸ್ಟ್‍ಮೆಂಟ್ ಗಿರಾಕಿಗಳಿಂದಾ ಪಕ್ಷಕ್ಕೆ ಸೋಲಾಗಿದೆ : ಯತ್ನಾಳ್

ಆರೋಪಿಗಳು ಗ್ರಾಹಕರಂತೆ ಗಮನ ಬೇರೆಡೆ ಸೆಳೆದು ಮೊಬೈಲ್ ಕಳವು ಮಾಡುತ್ತಿದ್ದ ಬಗ್ಗೆ ಹಾಗೂ ಹ್ಯಾಂಡಲ್ ಲಾಕ್ ಮುರಿದು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದುದು ಗೊತ್ತಾಗಿದೆ. ಆರೋಪಿಗಳ ಬಂಧನದಿಂದ ಜ್ಞಾನಭಾರತಿ ಪೊಲೀಸ್ ಠಾಣೆಯ 2 ದ್ವಿಚಕ್ರ ವಾಹನ ಕಳವು ಪ್ರಕರಣ, ಕುಂಬಳಗೂಡು, ಬೈಯ್ಯಪ್ಪನಹಳ್ಳಿ, ಬೇಗೂರು ಪೊಲೀಸ್ ಠಾಣೆಯ ತಲಾ 1 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ.

ಅಲ್ಲದೆ ನಗರದ ಹಲವಾರು ಕಡೆ ಗ್ರಾಹಕರಂತೆ ಗಮನ ಬೇರೆಡೆ ಸೆಳೆದು ಕಳವು ಮಾಡಿದ್ದ ಒಟ್ಟು 41 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ 11 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಗಿರೀಶ್ ಮತ್ತು ಕೆಂಗೇರಿ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಸವರಾಜು ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ರವಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು.

RELATED ARTICLES

Latest News