ಸಂವಿಧಾನ ಧಾರ್ಮಿಕ ಪುಸ್ತಕ ಎಂಬಂತೆ ನಾವು ನಡೆದುಕೊಳ್ಳುತ್ತಿದ್ದೇವೆ : ಕೇಂದ್ರ ಸಚಿವ

Social Share

ಕುರುಕ್ಷೇತ್ರ,ಡಿ.27- ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ನ್ಯಾಯಾಲಯಗಳಿಗೆ ಕೇಂದ್ರ ಸರ್ಕಾರ ಸಂಪೂರ್ಣ ಅಧಿಕಾರ ನೀಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜೂಜು ಹೇಳಿದ್ದಾರೆ.

ಹರಿಯಾಣದಲ್ಲಿನ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ನಡೆದ ಮೂರು ದಿನಗಳ ಭಾರತೀಯ ಅವಕಾತ್ ಪರಿಷತ್‍ನ ರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ವಿವಿಧ ನ್ಯಾಯಾಲಯಗಳಲ್ಲಿ 5 ಕೋಟಿಗೂ ಹೆಚ್ಚಿನ ಪ್ರಕರಣಗಳು ಬಾಕಿ ಉಳಿದಿವೆ. ಕೋವಿಡ್ ವೇಳೆಯಲ್ಲೂ ನ್ಯಾಯಾಲಯಗಳ ಕಾರ್ಯಾಚರಣೆಗೆ ತೊಂದರೆಯಾಗದಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು.

ಪ್ರಸ್ತುತ ಹಲವು ರಾಜಕೀಯ ಪಕ್ಷಗಳು, ಮಾಧ್ಯಮಗಳು ಕೇಂದ್ರ ಸರ್ಕಾರ ನ್ಯಾಯಾಂಗವನ್ನು ಹಿಡಿತದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಟೀಕೆ ಮಾಡುತ್ತಾರೆ. ಅದು ಆಧಾರರಹಿತ ನರೇಂದ್ರಮೋದಿ ಅವರು ಪ್ರಧಾನಿಯಾದ ಬಳಿಕ ನ್ಯಾಯಾಂಗ ಸ್ವವಿವೇಚನಾಯುತವಾಗಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಸಂವಿಧಾನ ಧಾರ್ಮಿಕ ಪುಸ್ತಕ ಎಂಬಂತೆ ನಾವು ನಡೆದುಕೊಳ್ಳುತ್ತಿದ್ದೇವೆ ಎಂದರು.

ಬ್ಯಾಟರಿ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಕಾನೂನು

ಈ ದೇಶದ ವ್ಯವಸ್ಥೆಯನ್ನು ಯಾರು ಸರಿಪಡಿಸುತ್ತಿದ್ದಾರೆ, ಯಾರು ನಾಶ ಪಡಿಸಿದರು ಎಂಬುದನ್ನು ಜನ ತೀರ್ಮಾನಿಸಬೇಕು. ನ್ಯಾಯಾೀಶರುಗಳು ಜನರ ಬದ್ದತೆಯನ್ನು ಹೊಂದಿರಬೇಕೆ ಹೊರತು ಸರ್ಕಾರದ ನಿಷ್ಠೆ ಅಗತ್ಯವಿಲ್ಲ. ನ್ಯಾಯಾಂಗ ದೇಶಕ್ಕಾಗಿ ಇರಬೇಕೆಂದು ನಾವು ಬಯಸುತ್ತೇವೆ. ಆದರೆ ಕೆಲವರು ಅವರ ಪಕ್ಷಗಳಿಗಾಗಿ ನ್ಯಾಯಾಂಗ ಕೆಲಸ ಮಾಡಬೇಕೆಂದು ಬಯಸುತ್ತಾರೆ ಎಂದು ಲೇವಡಿ ಮಾಡಿದರು.

Modi, government, will run, country, Constitution, Kiren Rijiju,

Articles You Might Like

Share This Article