ಹೈದರಾಬಾದ್,ಮಾ.12- ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮತ್ತಷ್ಟು ಕಠಿಣ ಮಾರ್ಗಗಳಲ್ಲಿ ಮುಂದುವರೆಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ತೆಲಂಗಾಣದ ಹೈದರಾಬಾದ್‍ನಲ್ಲಿ ಸಿಐಎಸ್‍ಎಫ್‍ನ 54ನೇ ರೈಸಿಂಗ್ ಡೇ ಪರೇಡ್‍ನಲ್ಲಿ ಮಾತನಾಡಿದ ಅವರು, ದೇಶದ ಯಾವುದೇ ಭಾಗದಲ್ಲಿ ಪ್ರತ್ಯೇಕತಾವಾದ, ಭಯೋತ್ಪಾದನೆ ಮತ್ತು ದೇಶ ವಿರೋ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಮತ್ತಷಟು ದೃಢವಾಗಿ ಎದುರಿಸಲಾಗುವುದು ಎಂದು ಹೇಳಿದರು.
ರಾಜ್ಯದ ಮತದಾರರಿಗೆ ನ್ಯಾ.ಸಂತೋಷ್ ಹೆಗ್ಡೆ ಸಂದೇಶ : ವಿಶೇರ್ಷ ಸಂದರ್ಶನ
ಕಳೆದ ಒಂಬತ್ತು ವರ್ಷಗಳಲ್ಲಿ ಎನ್‍ಡಿಎ ಸರ್ಕಾರವು ಆಂತರಿಕ ಭದ್ರತಾ ಸವಾಲುಗಳನ್ನು ಯಶಸ್ವಿಯಾಗಿ ನಿಭಾಯಿಸಿದೆ. ಕಾಶ್ಮೀರದಲ್ಲಿ ಹಿಂಸಾಚಾರ ಗಣನೀಯವಾಗಿ ಕಡಿಮೆಯಾಗುತ್ತಿದೆ. ಈಶಾನ್ಯ ಮತ್ತು ಎಡಪಂಥೀಯ ಉಗ್ರಗಾಮಿ ಪೀಡಿತ ಪ್ರದೇಶಗಳಲ್ಲಿ ಬಂಡಾಯವೂ ತಗ್ಗಿದ್ದು, ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ದೇಶದಲ್ಲಿ ಅವಕಾಶವಿಲ್ಲ ಎಂಬ ಜನರ ವಿಶ್ವಾಸ ಹೆಚ್ಚುತ್ತಿದೆ ಎಂದರು.
ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿರುವವರ ಸಂಖ್ಯೆ ಕ್ಷೀಣಿಸುತ್ತಿದೆ ಮತ್ತು ಅನೇಕರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಮುಖ್ಯವಾಹಿನಿಗೆ ಮರಳುತ್ತಿದ್ದಾರೆ.
ಅಕ್ರಮ ಸಿಲಿಂಡರ್ ದಾಸ್ತಾನು- ರೀಫಿಲ್ಲಿಂಗ್ ಮಾಡುತ್ತಿದ್ದ ಮನೆಮೇಲೆ ಸಿಸಿಬಿ ದಾಳಿ
ಮೊದಲ ಬಾರಿಗೆ, ಸಿಐಎಸ್‍ಎಫ್ ತನ್ನ ವಾರ್ಷಿಕ ಸಂಸ್ಥಾಪನೆ ದಿನಾಚರಣೆಯನ್ನು ಮೊದಲ ಬಾರಿಗೆ ರಾಷ್ಟ್ರೀಯ ರಾಜಧಾನಿ ದೆಹಲಿಯಿಂದ ಹೊರಗೆ ಇಲ್ಲಿನ ಹಕಿಂಪೇಟ್‍ನಲ್ಲಿರುವ ನ್ಯಾಷನಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಅಕಾಡೆಮಿಯಲ್ಲಿ ಆಚರಿಸಲಾಗುತ್ತಿದೆ.
Modi, govt, zero, tolerance policy, towards, terrorism, continue, Amit Shah,