Wednesday, September 11, 2024
Homeರಾಜಕೀಯ | Politicsಮೋದಿ 4 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆ, ರಾಹುಲ್ ಗಾಂಧಿಯವರಿಗೆ ಒಳ್ಳೆಯ ಕಾಲ ಬರಲಿದೆ : ಜಾರ್ಜ್

ಮೋದಿ 4 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆ, ರಾಹುಲ್ ಗಾಂಧಿಯವರಿಗೆ ಒಳ್ಳೆಯ ಕಾಲ ಬರಲಿದೆ : ಜಾರ್ಜ್

Modi loses power in 4 months, Rahul Gandhi will have a good time: George

ಕೋಲಾರ,ಆ.31- ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ. ಇನ್ನೂ ನಾಲ್ಕು ತಿಂಗಳಲ್ಲಿ ಅವರು ಅಧಿಕಾರ ಕಳೆದುಕೊಳ್ಳಲಿದ್ದು, ಮುಂದಿನ 15 ವರ್ಷ ರಾಹುಲ್ ಗಾಂಧಿ ಅವರಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಅವರ ಪತನದ ಕಾಲ ಸನಿಹಿತವಾಗಿದೆ ಎಂದರು.

ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಒಳ್ಳೆಯ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ ಬಿಜೆಪಿಯಂತೆ ಕೋಮುಭಾವನೆ ಹಾಗೂ ಜಾತಿ ಧರ್ಮಗಳ ಗಲಾಟೆಯ ಮೂಲಕ ರಾಜಕಾರಣ ಮಾಡಿಲ್ಲ. ಜನರ ಆಶೀರ್ವಾದವು ಕಾಂಗ್ರೆಸ್ ಪಕ್ಷಕ್ಕೆ ಇದ್ದು ಕಾರ್ಯಕರ್ತರಿಗೂ ಒಳ್ಳೆಯ ಅವಕಾಶ ಸಿಗಲಿದೆ ಎಂದರು.

ಮುಂದೆ ಸಹ ಕಾಂಗ್ರೆಸ್ ಪಕ್ಷದೊಂದಿಗೆ ಜನರ ವಿಶ್ವಾಸ ಇದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ ಎಂದು ಹೇಳಿದರು.

ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ದೇಶದಲ್ಲಿ ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಜನಪರ ಕಾರ್ಯಕ್ರಮಗಳನ್ನು ನೋಡಿ ಸಾಕಷ್ಟು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಬಯಸುತ್ತಿದ್ದಾರೆ. ಅಧಿಕಾರವಿರಲಿ ಇಲ್ಲದಿರಲಿ ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಕೋಲಾರ ಜಿಲ್ಲೆಯ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕೆ ಗಮನ ಹರಿಸಲು ಸಚಿವರನ್ನು ಕರೆಸಲಾಗಿದೆ ಜಿಲ್ಲೆಯಲ್ಲಿ ಹೊಸದಾಗಿ ಪವರ್ ಕೇಂದ್ರಗಳ ಸ್ಥಾಪನೆಗೆ ಒತ್ತು ನೀಡಿ ರೈತರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತದೆ ಎಂದು ಹೇಳಿದರು.

ಶಾಸಕ ಕೆ.ವೈ ನಂಜೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ವೇಗವಾಗಿ ನಾಯಕ ಅಂತ ಗುರುತಿಸಿಕೊಂಡು ಅವಕಾಶಗಳಿಗಾಗಿ ಬರತ್ತಾರೆ ಪಕ್ಷದ ನಾಯಕನು ಎನಿಸಿಕೊಂಡವರಿಗೆ ಪಕ್ಷದ ಬಗ್ಗೆ ನಿಷ್ಠೆ ತಾಳೆ ಇರಬೇಕು ಕಾಂಗ್ರೆಸ್ ಸರಕಾರವಿದೆ ಒಳ್ಳೆಯ ದಿನಗಳು ಬಂದಿವೆ ಅವಕಾಶಗಳು ಎಲ್ಲರಿಗೂ ಸಿಗುತ್ತವೆ ಎಂದರು,

ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷೆ ಲಕ್ಷೀದೇವಮ, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕೆ.ವಿ ಗೌತಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷೀನಾರಾಯಣ, ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸಾದ್ ಬಾಬು ಮುಂತಾದವರಿದ್ದರು.

RELATED ARTICLES

Latest News