ನವದೆಹಲಿ,ಏ.13- ಜಲಿಯನ್ ವಾಲಾಬಾಗ್ ಹತ್ಯಾಕಾಂಡದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.
ಮತ್ತು ಮುಂಬರುವ ಪೀಳಿಗೆಯು ಹುತಾತ್ಮರ ಅದಮ್ಮ ಚೇತನವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ವನಾಹತುಶಾಹಿ ಆಡಳಿತಕ್ಕೆ ದಮನಕಾರಿ ಅಧಿಕಾರಗಳನ್ನು ನೀಡಿದ ರೌಲತ್ ಕಾಯ್ದೆಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ನೂರಾರು ಜನರನ್ನು 1919 ರಲ್ಲಿ ಅಮೃತನರದ ಜಲಿಯನ್ ವಾಲಾ ಬಾಗ್ ನಲ್ಲಿ ಯಾವುದೇ ಪ್ರಚೋದನೆ ಇಲ್ಲದೆ ಬ್ರಿಟಿಷ್ ಪಡೆಗಳು ಗುಂಡಿಕ್ಕಿ ಕೊಂದಿದ್ದವು.
ನಾವು ಜಲಿಯನ್ ವಾಲಾಬಾಗ್ ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ. ಮುಂಬರುವ ಪೀಳಿಗೆಯು ಅವರ ಅದಮ್ಯ ಚೇತನವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತದೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ.
ಇದು ನಿಜವಾಗಿಯೂ ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿದೆ. ಅವರ ತ್ಯಾಗವು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ತಿರುವು ನೀಡಿತು ಎಂದು ಅವರು ಪೋಸ್ಟ್ ಮಾಡಿದ್ದಾರೆ.