Friday, February 23, 2024
Homeಕ್ರೀಡಾ ಸುದ್ದಿಅರ್ಜುನ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ : ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿ ಲಭಿಸಿರುವುದು ಸಂತಸ ತಂದಿದೆ : ಮೊಹಮ್ಮದ್ ಶಮಿ

ನವದೆಹಲಿ, ಜ.9- ಕ್ರೀಡಾ ಕ್ಷೇತ್ರದ ಅತ್ಯುನ್ನತ ಎರಡನೇ ಪ್ರಶಸ್ತಿಯಾದ ಅರ್ಜುನ ಪ್ರಶಸ್ತಿ ಲಭಿಸಿರುವುದು ನನ್ನ ಕ್ರಿಕೆಟ್ ಜೀವನಕ್ಕೆ ಸಿಕ್ಕ ಗೌರವವಾಗಿದೆ ಎಂದು ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಜೂನ್ 9 (ಮಂಗಳವಾರ) ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅವರು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ನಂತರ ಸುದ್ದಿಗಾರರೊಂದಿಗೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

2023ರ ಏಕದಿನ ವಿಶ್ವಕಪ್ ಟೂರ್ನಿಯ ಆರಂಭಿಕ 4 ಪಂದ್ಯಗಳಿಂದ ಹೊರಗುಳಿದಿದ್ದ ಮೊಹಮ್ಮದ್ ಶಮಿ ಅವರು 7 ಪಂದ್ಯಗಳಿಂದ 24 ವಿಕೆಟ್ ಪಡೆದು ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಹೊರಹೊಮ್ಮಿದ್ದರು.

ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 50 ವಿಕೆಟ್ ಪಡೆದ ಮೊದಲ ಭಾರತೀಯ ಬೌಲರ್ ಎಂಬ ದಾಖಲೆ ಬರೆದಿದ್ದ ಶಮಿ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ 7 ವಿಕೆಟ್ ಪಡೆದು ತಂಡ ಫೈನಲ್‍ಗೆ ತಲುಪು ವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಡಿಸಿಎಂ ರೇಸ್ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಹೆಸರು ಮುನ್ನಲೆಗೆ

2023ರಲ್ಲಿ ಮೊಹಮ್ಮದ್ ಶಮಿ ಅವರು ಕ್ರಿಕೆಟ್ ಅಂಗಳದಲ್ಲಿ ತೋರಿದ ಅಪ್ರತಿಮ ಪ್ರದರ್ಶನವನ್ನು ಪರಿಗಣಿಸಿ ಬಿಸಿಸಿಐ ಮಂಡಳಿಯು ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸ್ಸು ಮಾಡಿತ್ತು.

ಅರ್ಜುನ ಪ್ರಶಸ್ತಿ ಬಂದಿರುವುದು ಸಂತಸ ತಂದಿದೆ:
`ಈ ಪ್ರಶಸ್ತಿ ಪಡೆಯುವುದು ನನ್ನ ಕನಸಾಗಿತ್ತು. ಎಷ್ಟೋ ಕ್ರೀಡಾಪಟುಗಳು ಕ್ರೀಡಾ ಲೋಕದಲ್ಲಿ ಅಪ್ರತಿಮ ಸಾಧನೆ ತೋರಿದ್ದರೂ ಈ ಪ್ರಶಸ್ತಿ ಪಡೆಯಲು ಸಾಧ್ಯವಾಗುವುದೇ ಇಲ್ಲ. ಆದರೆ ನಾನು ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡು ಪ್ರಸಸ್ತಿ ಪಡೆದಿರುವುದಕ್ಕೆ ಅತೀವ ಸಂತಸವಾಗುತ್ತಿದೆ’ ಎಂದು ಹೇಳಿದ್ದಾರೆ.

ಆರಂಭಿಕ 2ಟೆಸ್ಟ್ ಪಂದ್ಯಗಳಿಂದ ಹೊರಕ್ಕೆ:
ಪಾದದ ಗಾಯದ ಸಮಸ್ಯೆ ಯಿಂದ ಬಳಲುತ್ತಿರುವ ಮೊಹಮ್ಮದ ಶಮಿ ಏಕದಿನ ವಿಶ್ವಕಪ್‍ನ ನಂತರ ಕ್ರಿಕೆಟ್ ರಂಗದಿಂದ ದೂರ ಉಳಿದಿದ್ದು, ಇಂಗ್ಲೆಂಡ್ ವಿರುದ್ಧ ನಡೆಯಲಿರುವ 3ನೇ ಟೆಸ್ಟ್ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡಲಿದ್ದಾರೆ.

RELATED ARTICLES

Latest News