ಬಾಲಕಿಗೆ ಕಿರುಕುಳ ನೀಡಿದ ವ್ಯಕ್ತಿಯನ್ನು ಹೊಡೆದು ಕೊಂದ ಕುಟುಂಬಸ್ಥರು

Social Share

ಉನ್ನಾವೋ(ಉ.ಪ್ರ),ಮಾ.9-ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿಗೆ ಕಿರುಕುಳ ನೀಡಲು ಯತ್ನಿಸಿದ ಆರೋಪಿಯೊಬ್ಬನನ್ನು ಆಕೆಯ ಕುಟುಂಬದವರು ಹೊಡೆದು ಕೊಂದಿರುವ ಘಟನೆ ಉನ್ನಾವೋ ಜಿಲ್ಲೆಯ ದಾಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಹೊಲಕ್ಕೆ ಹೋಗಿದ್ದ ವೇಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಸಮಯ ಸಾಸಿ ಮನೆಗೆ ಬಂದ ವ್ಯಕ್ತಿ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದ.
ಈ ವಿಷಯ ತಿಳಿದು ಮನೆಗೆ ದೌಡಾಯಿಸಿದ ಕುಟುಂಬಸ್ಥರು ಆರೋಪಿಯನ್ನು ಹಿಡಿದು ತೀವ್ರವಾಗಿ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರೊಳಗೆ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ದಾಹಿ ಪೊಲೀಸ್ ಠಾಣೆಯಲ್ಲಿ ಕಿರುಕುಳ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Articles You Might Like

Share This Article