ಮಂಕಿಪಾಕ್ಸ್ ಬೆಂಗಳೂರಿನಲ್ಲಿ ಕಟ್ಟೆಚ್ಚರ: ತುಷಾರ್ ಗಿರಿನಾಥ್

Social Share

ಬೆಂಗಳೂರು,ಆ.3- ಮಂಕಿಪಾಕ್ಸ್ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆಯ ಕೇರಳದಲ್ಲಿ ಸೋಂಕು ಪತ್ತೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಿದ್ದೇವೆ. ಕೇರಳ ಹಾಗೂ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ.

ರೈಲ್ವೆ, ಬಸ್ ನಿಲ್ದಾಣಗಳಲ್ಲಿ ಆರೋಗ್ಯ ಹಾಗೂ ಬಿಬಿಎಂಪಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು, ಪ್ರಯಾಣಿಕರಿಗೆ ತಪಾಸಣೆ ನಡೆಸಿ ಸ್ಕ್ರೀನಿಂಗ್ ಕೂಡ ಮಾಡಲಾಗುತ್ತದೆ. ಈ ವೇಳೆ ಸೋಂಕಿತರು ಕಂಡು ಬಂದರೆ ಅವರನ್ನು ಐಶೋಲೇಷನ್ ಮಾಡಲಾಗುತ್ತದೆ. ನಗರದಲ್ಲಿ ಇಲ್ಲಿಯವರೆಗೂ ಯಾವುದೇ ಮಂಕಿ ಪಾಕ್ಸ್ ಸೋಂಕು ಪ್ರಕರಣಗಳು ಪತ್ತೆಯಾಗಿಲ್ಲ.

ಸಾರ್ವಜನಿಕರು ಭಯಪಡುವಂತಿಲ್ಲ. ಆದರೆ, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರೋಗ ನಿಯಂತ್ರಣಕ್ಕೆ ಸಹಕರಿಸುವಂತೆ ಮನವಿ ಮಾಡಿದರು.

Articles You Might Like

Share This Article