ಬೆಂಗಳೂರು, ಜು.16-ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಜು.20ರವರೆಗೂ ಮಳೆ ಮುಂದುವರೆಯಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗದ ಕೆಲವೆಡೆ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ. ಆದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಮಾತ್ರ ಮಳೆಯಾಗುತ್ತಿದ್ದು, ಜೂನ್ ನಂತೆ ಜುಲೈ ತಿಂಗಳಲ್ಲೂ ಮಳೆ ಕೊರತೆ ಮುಂದುವರೆದಿದ್ದು, ಬಿತ್ತನೆ ಮಾಡಲಾಗದೆ ರೈತರು ಆತಂಕದಲ್ಲಿದ್ದಾರೆ. ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ನಿನ್ನೆ ವ್ಯಾಪಕ ಪ್ರಮಾಣದ ಮಳೆಯಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದ ಮಳೆಯಾಗಿದೆ. ಉಳಿದಂತೆ ಕೆಲವೆಡೆ ಮಾತ್ರ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ನೀಲ್ಕುಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 137 ಮಿ.ಮೀ. ಅಧಿಕ ಮಳೆಯಾಗಿದೆ.
ಕರಾವಳಿ ಹಾಗೂ ಕರಾವಳಿಗೆ ಹೊಂದಿಕೊಂಡಂತಹ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಉದಳಿದಂತೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
- ಶೀಘ್ರದಲ್ಲೇ ಶುಭಸುದ್ದಿ : ಬಿಜೆಪಿಗೆ ಮರಳುವರೇ ಯತ್ನಾಳ್..?
- ಬಾಂಗ್ಲಾದಲ್ಲಿ ಧ್ವಂಸಗೊಳಿಸಲಾಗಿರುವ ಸತ್ಯಜಿತ್ ರೇ ಪೂರ್ವಿಕರ ಮನೆ ಪುನರ್ನಿರ್ಮಾಣ ಭಾರತ ಮನವಿ
- ಪಹಲ್ಗಾಮ್ ದಾಳಿ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಭಾರಿ ಕುಸಿತ
- ತುಮುಲ್ನಿಂದ ತಿರುಪತಿಗೆ ತುಪ್ಪ ರವಾನೆ
- ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದಂತೆ ಕುಸಿದು ಬಿದ್ದು ಪ್ರಾಣಬಿಟ್ಟ ಯುವಕ