ಮುಂದುವರೆದ ಮುಂಗಾರು ಮಳೆ ಅಬ್ಬರ, ಜಲಾಶಯಗಳು ಭರ್ತಿ, ನದಿಪಾತ್ರದ ಗ್ರಾಮಗಳು ಜಲಾವೃತ

ಬೆಂಗಳೂರು,ಜು.26– ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ನಿರಂತರ ಮಳೆಯಿಂದ ಅನೇಕ ಕಡೆ ಮರಗಳು ಧರೆಗುರುಳಿ ರಸ್ತೆ ಸಂಚಾರಕ್ಕೆ ಅಡಚಣೆಯುಂಟಾಗಿದೆ.ವಿದ್ಯುತ್‌ ಕಂಬಗಳು ಮುರಿದು ಬಿದ್ದು ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಜಲಾಶಯಗಳು ಭರ್ತಿಯಾಗಿ ಭಾರಿ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ನದಿಪಾತ್ರದ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಮಂಡ್ಯದಲ್ಲಿ ಕಾವೇರಿಯ ಅಬ್ಬರ ಹೆಚ್ಚಾಗಿದೆ. ಕೆಆರ್‌ಎಸ್‌‍ನಿಂದ ಭಾರಿ ಪ್ರಮಾಣದಲ್ಲಿ ನೀರನ್ನು ಹೊರಬಿಡುತ್ತಿರುವುದರಿಂದ ನದಿಪಾತ್ರದಲ್ಲಿರುವ ಧಾರ್ಮಿಕ ಕ್ಷೇತ್ರಗಳು ಮುಳುಗಡೆಯಾಗಿವೆ.ನಿಮಿಷಾಂಬ ದೇಗುಲದ ಸ್ನಾನಘಟ್ಟ ಸಂಪೂರ್ಣ ಜಲಾವೃತವಾಗಿದೆ. ಕಾವೇರಿ ನದಿ ಬಳಿ ಬ್ಯಾರಿಕೇಡ್‌ ಅಳವಡಿಸಿ ಸಾರ್ವಜನಿಕರಿಗೆ ನಿರ್ಬಂಧ … Continue reading ಮುಂದುವರೆದ ಮುಂಗಾರು ಮಳೆ ಅಬ್ಬರ, ಜಲಾಶಯಗಳು ಭರ್ತಿ, ನದಿಪಾತ್ರದ ಗ್ರಾಮಗಳು ಜಲಾವೃತ